ಬಂಟ್ವಾಳ:ರಾಯಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ, ಕುಕ್ಕಿಪಾಡಿ ಗ್ರಾಮದ ಮಾದೇರಿ ನಿವಾಸಿ ರಮೇಶ್ ಭಟ್ ಮಾದೇರಿ(82) ಹೃದಯಾಘಾತದಿಂದ ಮಾ.31ರಂದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.ಮೃತರು ಪತ್ನಿ, ಪುತ್ರ, ನಿಟ್ಟೆ ಎಂಜಿನೀಯರಿಂಗ್ ಕಾಲೇಜಿನ ಉಪನ್ಯಾಸಕ ಪ್ರದೀಪ್ ಭಟ್ ಹಾಗೂ ಪುತ್ರಿಯನ್ನು ಅಗಲಿದ್ದಾರೆ.ಅವರು ಹಿಂದೆ ಹವ್ಯಾಸಿ ಯಕ್ಷಗಾನ ಕಲಾವಿದರಾಗಿದ್ದು, ತಾಳಮದ್ದಳೆ ಅರ್ಥದಾರಿಯಾಗಿ, ಮದ್ದಳೆ ವಾದಕರಾಗಿ ಪ್ರಸಿದ್ಧರಾಗಿದ್ದರು. 15 ವರ್ಷಗಳ ಕಾಲ ರಾಯಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ ದೇವಸ್ಥಾನವನ್ನು ಅಭಿವೃದ್ಧಿಗೊಳಿಸಿದ್ದರು. ದೇವಸ್ಥಾನದ ಭಜನ ಮಂಡಳಿ ಮಾಜಿ ಅಧ್ಯಕ್ಷರಾಗಿದ್ದರು. ಅವರು ಸಿದ್ದಕಟ್ಟೆ ಸೇವಾ ಸಹಕಾರಿ ಸಂಘ, ಹಾಲು ಉತ್ಪಾದಕರ ಸಹಕಾರಿ ಸಂಘದ ಮಾಜಿ ನಿರ್ದೇಶಕರಾಗಿದ್ದರು.ಸರಕಾರಿ ಸೇವೆಯಲ್ಲಿದ್ದ ಅವರು ಕಂದಾಯ ಇಲಾಖೆಯಲ್ಲಿ ಗ್ರಾಮ ಕರಣಿಕರಾಗಿ ಸಿದ್ದಕಟ್ಟೆ ಮೊದಲಾದೆಡೆ ಮತ್ತು ಬಂಟ್ವಾಳ ತಾಲೂಕು ಕಚೇರಿ ಆಹಾರ ನಿರೀಕ್ಷಕರಾಗಿ ನಿವೃತ್ತಿ ಹೊಂದಿದ್ದರು

3103pktG1(Ramesh Bhat.

By suddi9

Leave a Reply

Your email address will not be published. Required fields are marked *