ಸುದ್ದಿ9 ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ ಹಾಗೂ ತುಂಬೆ ಪೌಢಶಾಲೆ ಇದರ ಸಂಯುಕ್ತ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ ಬಾಲಕಿಯ ವಾಲಿಬಾಲ್ ಪಂದ್ಯಾಟ ಮಂಗಳವಾರ ತುಂಬೆ ಬಿ.ಎ. ಪ್ರೌಢಶಾಲಾ ಕ್ರೀಡಾಂಗಣದಲ್ಲಿ ನಡೆಯಿತು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ವಾಲಿಬಾಲ್ ಪಂದ್ಯಾಟವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಆಶಾ ತಿಮ್ಮಪ್ಪ ಗೌಡ ವಾಲಿಬಾಲ್ ಆಡುವ ಮೂಲಕ ಪಂದ್ಯಟಕ್ಕೆ ಚಾಲನೆ ನೀಡಿದರು. ಜಿ.ಪಂ.ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದರು. ತುಂಬೆ ಪದವಿ ಪೂರ್ವ ಕಾಲೇಜಿನ ಸಂಚಾಲಕ ಬಸ್ತಿ ವಾಮನ ಶೆಣೈ, ಜಿ.ಪಂ.ಸದಸ್ಯೆ ಮಮತಾ ಗಟ್ಟಿ, ತುಂಬೆ ಗ್ರಾಮ ಪಂಚಾಯತ್ ಅಧ್ಯಕ್ಷ ಮಹಮ್ಮದ್ ವಳವೂರು, ಸದಸ್ಯರಾದ ಜೆಸಿಂತಾ ಕುವೆಲ್ಲೋ, ಆತಿಕಾ ಬಾನು, ಚಂದ್ರಹಾಸ ಕಡೆಗೋಳಿ, ಗಣೇಶ್ ಸಾಲ್ಯಾನ್, ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಪಿ.ವಿ.ಜೊಸೆಫ್, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ರಾಧಕೃಷ್ಣ ಅಡ್ಯಂತಾಯ , ಪ್ರಕಾಶ್ಚಂದ್ರ ರೈ ದೇವಸ್ಯ, ಶಿಕ್ಷಕ- ರಕ್ಷಕ ಸಂಘದ ಅಧ್ಯಕ್ಷ ರಾಜಾರಾಂ ಶೆಟ್ಟಿ, ಜಿಲ್ಲಾ ದೈಹಿಕ ಶಿಕ್ಷಣ ಅಧಿಕ್ಷಕ ಕೆ.ಬಿ.ಕೇಶವ ಹಾಜರಿದ್ದರು.
ಕಾಲೇಜಿನ ಪ್ರಾಂಶುಪಾಲ ಕೆ.ಎನ್.ಗಂಗಾಧರ ಆಳ್ವ ಸ್ವಾಗತಿಸಿದರು. ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಗುರುನಾಥ ಬಾಗೇವಾಡಿ ವಂದಿಸಿದರು.

 

By Suddi9

Leave a Reply

Your email address will not be published. Required fields are marked *