ಜಮ್ಮು ಕಾಶ್ಮೀರ :ರಜೆಯಲ್ಲಿದ್ದ ಯೋಧನೊಬ್ಬನನ್ನು ಭಯೋತ್ಪಾದಕರು ಗುಂಡಿಕ್ಕಿ ಕೊಂದಿರುವ ಘಟನೆ ಉತ್ತರ ಕಾಶ್ಮೀರದ ಬಾರಮುಲ್ಲಾ ಜಿಲ್ಲೆಯಲ್ಲಿ ನಡೆದಿದೆ. ಮೃತಪಟ್ಟ ಯೋಧನನ್ನು ಇಲ್ಲಿನ ವಾರ್ಪೋರಾದ ನಿವಾಸಿ ಮುಹಮ್ಮದ್ ರಫೀಕ್ ಯಾತೂ ಎಂದು ಗುರುತಿಸಲಾಗಿದೆ.
ಜಮ್ಮು ಕಾಶ್ಮೀರ ಲೈಟ್ ಇನ್ಫಾಂಟ್ರಿಯ ಯೋಧರಾಗಿರುವ ರಫೀಕ್ ರಜೆಯಲ್ಲಿ ಮನೆಗೆ ಆಗಮಿಸಿದ್ದರು. ಉಗ್ರರ ದಾಳಿಯಿಂದ ಅವರು ಗಂಭೀರ ಗಾಯಗೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

