ಕುಂದಾಪುರ : ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿಯಲ್ಲಿ ಗ್ರಾಮ ಪಂಚಾಯತ್ ಸದಸ್ಯನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕೆರ್ಗಾಲ್ ಗ್ರಾಪಂ ಸದಸ್ಯ ರಮೇಶ್ ಗಾಣಿಗ ಮೊಗೇರಿ (38) ಎಂದು ಗುರುತಿಸಲಾಗಿದೆ.  ಈತ ಎ.16ರಂದು 14 ವರ್ಷ ವಯಸ್ಸಿನ ಬಾಲಕನನ್ನು ನಿರ್ಮಾಣ ಹಂತದ ಮನೆಯೊಂದಕ್ಕೆ ಕರೆದೊಯ್ದು ಆತನಿಗೆ ಲೈಂಗಿಕ ಕಿರುಕುಳ ನೀಡಿದ ಎನ್ನಲಾಗಿದೆ. ಈ ವೇಳೆ ಬಾಲಕ ಅಲ್ಲಿಂದ ತಪ್ಪಿಸಿಕೊಂಡು ಮನೆ ಸೇರಿದ್ದ ಎಂದು ತಿಳಿದು ಬಂದಿದೆ. ಈ ಬಗ್ಗೆ ಬಾಲಕನ ಪೋಷಕರು ನೀಡಿದ ದೂರಿನಂತೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
WhatsApp Image 2019-04-18 at 9.03.27 AM
ಈ ಕುರಿತು ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

 

By suddi9

Leave a Reply

Your email address will not be published. Required fields are marked *