ಮೂಡುಬಿದಿರೆ: 9 ರಿಂದ 16 ವರ್ಷದ ಮಕ್ಕಳಿಗೆ ಏಪ್ರಿಲ್ 22 ರಿಂದ ಮೇ 5 ರವರೆಗೆ ನಡೆಯಲಿರುವ ಉಚಿತ ಬೇಸಿಗೆ ಶಿಬಿರವನ್ನು ಮೂಡುಬಿದಿರೆ ಶಿಕ್ಷಣಾಧಿಕಾರಿಗಳ ಕಚೇರಿಯ ಬಿ.ಆರ್.ಸಿ. ಸಭಾಂಗಣದಲ್ಲಿ ಉದ್ಘಾಟಿಸಲಾಯಿತು.

ಮೂಡುಬಿದಿರೆ ಕ್ಷೇತ್ರ ಶಿಕ್ಷಣಾಧಿಕಾರಿ ಆಶಾ ಶಿಬಿರವನ್ನು ಉದ್ಘಾಟಿಸಿ, ಬೇಸಿಗೆ ಶಿಬಿರಗಳಲ್ಲಿ ಮಕ್ಕಳು ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಮಕ್ಕಳಲ್ಲಿ ಕೌಶಲ್ಯ ವೃದ್ಧಿಯಗುತ್ತದೆ. ಮಕ್ಕಳು ಬೇಸಿಗೆ ಶಿಬಿರದಲ್ಲಿ ಕ್ರಿಯಾಶೀಲರಾಗಿ ಪಾಲ್ಗೊಳ್ಳಬೇಕು ಎಂದರು.
ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ಯಾಮಲ ಸಿ.ಕೆ. ಅಧ್ಯಕ್ಷತೆ ವಹಿಸಿದರು.
ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಶಿವಾನಂದ ಕಾಯ್ಕಿಣಿ, ಪ್ರಭಾರ ಕ್ಷೇತ್ರ ಸಮನ್ವಯಾಧಿಕಾರಿ ಸುಚಿತ್ರಾ ಗೊನ್ಸಾಲ್ವೀಸ್, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ವಿನುತಾ, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಉಷಾ ಡಿ., ಮೇಲ್ವೀಚಾರಕಿ ಮಾಲಿನಿ, ಸಂಪನ್ಮೂಲ ವ್ಯಕ್ತಿಗಳಾದ ಮಹೇಶ್, ದಿವ್ಯಾ, ಸವಿತಾ, ಪೂರ್ಣಿಮಾ, ಅರುಣಾ ಮುಖ್ಯ ಅತಿಥಿಗಳಾಗಿದ್ದರು.
ಮೇಲ್ವೀಚಾರಕಿ ಭಾರತಿ ಸ್ವಾಗತಿಸಿದರು. ಮೇಲ್ವೀಚಾರಕಿಯರಾದ ಕಾತ್ಯಾಯಿನಿ, ಶುಭಾ ಕಾರ್ಯಕ್ರಮ ನಿರೂಪಿಸಿದರು. ಮೇಲ್ವೀಚಾರಕಿ ರತಿಶೆಟ್ಟಿ ವಂದಿಸಿದರು.
ರಾಜ್ಯ ಬಾಲಭವನ ಸೊಸೈಟಿ ಬೆಂಗಳೂರು, ದ.ಕ. ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಮಂಗಳೂರು ಗ್ರಾಮಾಂತರ, ಸಾರ್ವಜನಿಕ ಶಿಕ್ಷಣ ಇಲಾಖೆ ಮೂಡುಬಿದಿರೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಬೇಸಿಗೆ ಶಿಬಿರ ಆಯೋಜಿಸಲಾಗಿದೆ.
