ವಿರಾಜಪೇಟೆ: ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ಯಾವುದೋ ಕಾರಣಕ್ಕಾಗಿ ಕಾಂಗ್ರೆಸ್ ಮುಖಂಡರೋರ್ವರನ್ನು ಕಗ್ಗೊಲೆ ಮಾಡಲಾಗಿದೆ. ಕಾಂಗ್ರೆಸ್ ಮುಖಂಡ ಇಕ್ಬಾಲ್ ಹಸನ್ ಕೊಲೆಗೀಡಾದ ದುರ್ದೈವಿ. ಕಾಂಗ್ರೆಸ್ ನ ಜಿಲ್ಲಾ ಮುಖಂಡ ಹಾಗೂ ಮಾಜ ಜಿ.ಪಂ ಅಧ್ಯಕ್ಷರಾಗಿದ್ದ ಹಸನ್ ಪ್ರಭಾವಿ ವ್ಯಕ್ತಿಯಾಗಿದ್ದರು. ಘಟನೆಯಲ್ಲಿ ಇನ್ನೋರ್ವರು ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ. ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

