ಬಂಟ್ವಾಳ: ರಾ.ಹೆ.75ರ ಪಾಣೆಮಂಗಳೂರು ಅಡಿಟೋರಿಯಂ ವೊಂದರ ಮುಂಭಾಗ ಶುಕ್ರವಾರ ಮಧ್ಯಾಹ್ನ ನಡೆದ ಭೀಕರ ಅಘಪಾತದಲ್ಲಿ ಇಬ್ಬರು ಮಹಿಳೆಯರು ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಕೆಎಸ್ಸಾರ್ಟಿಸಿ ಬಸ್ ಮತ್ತು ಸೆಲೆರಿಯೋ ಮಾರುತಿ ಕಾರ್ ನಡುವೆ ಅಪಘಾತ ಸಂಭವಿಸಿದ್ದು, ಅಪಘಾತದ ರಭಸಕ್ಕೆ ಕಾರಿನ ಎದುರು ಭಾಗ ನಜ್ಜುಗುಜ್ಜಾಗಿದೆ.WhatsApp Image 2019-04-26 at 13.46.05

ಮಂಗಳೂರು ಜಪ್ಪುಗುಡ್ಡೆ ನಿವಾಸಿಗಳಾದ ರುಕ್ಮಿಣಿ ಸಿ. ಮಲ್ಲಿ (63) ಮತ್ತು ಸರೋಜಿನಿ ಟಿ. ಶೆಟ್ಟಿ (65) ಮೃತಪಟ್ಟವರಾಗಿದ್ದು ಕಾರಿನಲ್ಲಿದ್ದ ಅನುಶ್ರೀ (40), ಕಾರು ಚಾಲಕ ಮಂಗಳೂರಿನ ಶಕ್ತಿನಗರ ನಿವಾಸಿ ಉಮೇಶ್ (45) ಗಾಯಗಳೊಂದಿಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ. ಕಾರಿನಲ್ಲಿದ್ದವರು ನರಿಕೊಂಬು ಪರಿಸರದಲ್ಲಿ ನಡೆಯುತ್ತಿದ್ದ ಗೃಹಪ್ರವೇಶಕ್ಕೆ ತೆರಳುತ್ತಿದ್ದರು ಎನ್ನಲಾಗಿದ್ದು, ಬಸ್ಸು ಉಪ್ಪಿನಂಗಡಿಯಿಂದ ಮಂಗಳೂರಿಗೆ ಬರುತ್ತಿದ್ದರೆ, ಕಾರು ಮಂಗಳೂರಿನಿಂದ ಪಾಣೆಮಂಗಳೂರು ಕಡೆಗೆ ಸಾಗುತ್ತಿತ್ತು. ಘಟನೆಯಿಂದ ಹೆದ್ದಾರಿಯಲ್ಲಿ ಕೆಲ ಹೊತ್ತುಗಳ ಕಾಲ ಸಂಚಾರ ಅಸ್ತವ್ಯಸ್ತಗೊಂಡಿತು.ಸುದ್ದಿ ತಿಳಿದ ಬಂಟ್ವಾಳ ಟ್ರಾಫಿಕ್ ಪೊಲೀಸರು ಸ್ಥಳಕ್ಕಾಹಮಿಸಿ ಮುಂದಿನ ಕ್ರಮ ಕೈಗೊಂಡರು.ಈ ಬಗ್ಗೆ ಟ್ರಾಫಿಕ್ ಠಾಣೆಯಲ್ಲಿ ಕೇಸು ದಾಖಲಾಗಿದ್ದು,ಮುಂದಿನ ತನಿಖೆ ನಡೆಯುತ್ತಿದೆ.

By suddi9

Leave a Reply

Your email address will not be published. Required fields are marked *