ಸುದ್ದಿ 9 ಮೂಡುಬಿದರೆ: ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಉಡುಪಿ ಜಿಲ್ಲೆ ಮತ್ತು ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಎರಡು ದಿನಗಳ ಕಾಲ ನಡೆಯುವ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟವು ವಿದ್ಯಾಗಿರಿಯಲ್ಲಿ ಬುಧವಾರ ಆರಂಭಗೊಂಡಿತು.
ಮೂಡುಬಿದರೆ ಪುರಸಭಾಧ್ಯಕ್ಷೆ ಸುಪ್ರಿಯಾ.ಡಿ.ಶೆಟ್ಟಿ ಕ್ರೀಡಾಕೂಟಕ್ಕೆ ಚಾಲನೆಯನ್ನು ನೀಡಿ ಮಾತನಾಡಿ ಕ್ರೀಡಾಪಟುಗಳು ಕ್ರೀಡೆಗಳಲ್ಲಿ ಉತ್ತಮ ಸಾಧನೆಗಳನ್ನು ಮಾಡಿ ದೇಶಕ್ಕೆ ಕೀರ್ತಿ ಯನ್ನು ತರಬೇಕಾಗಿದೆ. ಆಳ್ವಾಸ್ ಶಿಕ್ಷಣ ಸಂಸ್ಥೆಯ ಡಾ.ಎಂ.ಮೋಹನ ಆಳ್ವರು ಕ್ರೀಡೆಗೆ ಹೆಚ್ಚಿನ ಆದ್ಯತೆಯನ್ನು ನೀಡುತ್ತಿದ್ದಾರೆ ಮುಂದೆ ಕಾಮನ್ವೆಲ್ತ್,ಓಲಂಪಿಕ್ನಂತಹ ಕ್ರೀಡಾಕೂಟಗಳು ರಾಜ್ಯದಲ್ಲಿ ನಡೆದಾಗ ಅದರಲ್ಲಿ ಮೂಡುಬಿದರೆಯ ಕ್ರೀಡಾಪಟುಗಳು ಹೆಚ್ಚಿನ ಸಾಧನೆಯನ್ನು ಮಾಡಬೇಕು ಎಂದು ಹೇಳಿದರು.
ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಉಡುಪಿ ಜಿಲ್ಲೆ ಇದರ ಸಹಾಯಕ ನಿದೇರ್ಶಕ ರೋಶನ್ ಕುಮಾರ್, ದ.ಕ. ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ  ನಿರ್ದೇಶಕ ಪಾಂಡುರಂಗ ಗೌಡ  ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಅಧ್ಯಕ್ಷತೆ ವಹಿಸಿದ್ದರು.
ದೈಹಿಕ ಶಿಕ್ಷಣ ನಿರ್ದೇಶಕ ಪ್ರವೀಣ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಮೊದಲ ದಿನ ಬಾಲ್ ಬ್ಯಾಡ್ಮಿಂಟನ್, ಹ್ಯಾಂಡ್ಬಾಲ್ ಹಾಗೂ ತ್ರೋಬಾಲ್ ಸ್ಪರ್ಧೆಗಳು ನಡೆದವು. ಮೈಸೂರು ವಿಭಾಗ ವ್ಯಾಪ್ತಿಯ 8 ಜಿಲ್ಲೆಗಳಿಂದ ಸುಮಾರು 600 ಕ್ರೀಡಾಪಟುಗಳು ಭಾಗವಹಿಸಿದ್ದಾರೆ.

 

1(a)

 

By suddi9

Leave a Reply

Your email address will not be published. Required fields are marked *