ಮೂಡುಬಿದಿರೆ: ಜಗತ್ತಿನಲ್ಲಿ ಶ್ರೇಷ್ಠವಾದ ಧರ್ಮ ಹಾಗೂ ಸಂಸ್ಕøತಿಯನ್ನು ಹೊಂದಿರುವ ದೇಶ ನಮ್ಮದು. ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ನಮ್ಮ ದೇಶದ ಧರ್ಮ ಹಾಗೂ ಸಂಸ್ಕøತಿ ಮೇಲೆ ಪದೇ ಪದೇ ದಾಳಿಗಳು ನಡೆಯುತ್ತಿದ್ದರೂ, ಅವುಗಳನ್ನು ಹಿಮ್ಮೇಟಿಸುವಂತಹ ಶಕ್ತಿ ನಮ್ಮ ಧರ್ಮದಲ್ಲಿದೆ ಎಂದು ಉದ್ಯಮಿ ಕೆ.ಶ್ರೀಪತಿ ಭಟ್ ಹೇಳಿದರು.

ಇರುವೈಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ನಡೆದ ಧಾರ್ಮಿಕ ಸಭೆ ಹಾಗೂ ಸನ್ಮಾನ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದರು.
ಸನ್ಮಾನ: ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಬಾಬು ಪೂಜಾರಿ ದೇವರಗುಡ್ಡೆ, ತನಿಯ ಮುಳಿಬೆಟ್ಟು, ಶೇಖರ ದಡ್ಡೆಗುಡಿ ಅವರನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು.
ಅದ್ಯಪಾಡಿ ಶ್ರೀನೀಲಕಂಠ ಉಮಾಮಹೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಮಂಜುನಾಥ ಭಂಡಾರಿ, ಮೂಡುಬಿದಿರೆ ಶ್ರೀ ವೆಂಕಟರಮಣ, ಹನುಮಂತ ದೇವಸ್ಥಾನದ ಟ್ರಸ್ಟಿ ಶಿವಾನಂದ ಪ್ರಭು, ಉದ್ಯಮಿ ಮೇಘನಾಥ ಶೆಟ್ಟಿ, ಸೇಸಪ್ಪ ಕೋಟ್ಯಾನ್ ಪಚ್ಚಿನಡ್ಕ, ನಮ್ಮ ಕುಡ್ಲ ವಾಹಿನಿಯ ನಿರ್ದೇಶಕ ಲೀಲಾಕ್ಷ ಬಿ.ಕರ್ಕೇರ, ಮಕ್ಕಳ ತಜ್ಞ ಡಾ.ಮುರಳೀಕೃಷ್ಣ ಆರ್.ವಿ ಮುಖ್ಯ ಅತಿಥಿಗಳಾಗಿದ್ದರು.
ಶ್ರೀಕ್ಷೇತ್ರ ಇರುವೈಲು ಬ್ರಹ್ಮಕಲಶ ಸಮಿತಿ ಅಧ್ಯಕ್ಷ ಸತೀಶ್ಚಂದ್ರ ಸಾಲ್ಯಾನ್ ಪಾಣಿಲ, ವ್ಯವಸ್ಥಾಪನಾ ಸಮಿತಿ ಗೌರವಾಧ್ಯಕ್ಷ ಭುಜಂಗ ಆರ್. ಶೆಟ್ಟಿ, ಅಧ್ಯಕ್ಷ ಪೂವಪ್ಪ ಸಾಲ್ಯಾನ್ ಉಪಸ್ಥಿತರಿದ್ದರು.
ಪ್ರವೀಣ್ ಪೂಜಾರಿ ಸ್ವಾಗತಿಸಿದರು. ರಮೇಶ್ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು. ಶೀನ ನಾಯ್ಕ್ ಪೊರಿಮೇಲು ವಂದಿಸಿದರು.
