ಸುದ್ದಿ 9 ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ವಾಮದಪದವು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಗೋಪಾಲಕೃಷ್ಣ ಚೌಟ ಮತ್ತು ಕಾರ್ಯದರ್ಶಿ ನಾರಾಯಣ ಶೆಟ್ಟಿ ಇವರನ್ನು ಮಂಗಳೂರಿನಲ್ಲಿ ಭಾನುವಾರ ನಡೆದ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ‘ಸಾಧನಾ ಪ್ರಶಸ್ತಿ’ ನೀಡಿ ಗೌರವಿಸಿದರು. ಬ್ಯಾಂಕಿನ ಅಧ್ಯಕ್ಷ ಎಂ.ಎನ್.ರಾಜೇಂದ್ರ ಕುಮಾರ್ ಮತ್ತಿತರರು ಇದ್ದರು.

