ಮಂಗಳೂರು: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತದ ನೂತನ ಅಧ್ಯಕ್ಷರಾಗಿ ರವಿರಾಜ್ ಹೆಗ್ಡೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಎಸ್.ಪ್ರಕಾಶ್ಚಂದ್ರ ಶೆಟ್ಟಿ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಕುಲಶೇಖರದ ಸಂಸ್ಥೆಯ ಹಾಲ್ನಲ್ಲಿ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ರವಿರಾಜ್ ಹೆಗ್ಡೆ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಬೇರೆ ಯಾವುದೇ ನಾಮಪತ್ರ ಇಲ್ಲದೇ ಇರುವ ಕಾರಣ, ಅವಿರೋಧವಾಗಿ ರವಿರಾಜ್ ಹೆಗ್ಡೆ ಅವರನ್ನು ಅಧ್ಯಕ್ಷರಾಗಿ ಘೋಷಿಸಲಾಯಿತು. ಉಪಾಧ್ಯಕ್ಷ ಸ್ಥಾನಕ್ಕೆ ಎಸ್.ಪ್ರಕಾಶ್ಚಂದ್ರ ಶೆಟ್ಟಿ ಅವರು ಮಾತ್ರ ನಾಮಪತ್ರ ಸಲ್ಲಿಸಿದ್ದರು. ಎಸ್.ಸಿ ಮಹೇಶ್ ಚುನಾವಣೆ ಅಧಿಕಾರಿಯಾಗಿ ಭಾಗವಹಿಸಿದರು.
ಒಕ್ಕೂಟದ ವ್ಯವಸ್ಥಾಪಕ ಡಾ.ಜಿ.ವಿ ಹೆಗ್ಡೆ ಹಾಗೂ ನಿರ್ದೇಶಕರು ಉಪಸ್ಥಿತರಿದ್ದರು.
