ಬಂಟ್ವಾಳ : ಶತಮಾನೋತ್ತರ ಬೆಳ್ಳಿ ಹಬ್ಬದ ಸಂಭ್ರಮದಲ್ಲಿರುವ ಬೊರಿಮಾರ್ ಚರ್ಚ್ ನಲ್ಲಿ ನಡೆದ ಅವಿಸ್ಮರಣೀಯ ಕಾರ್ಯಕ್ರಮ ನನ್ನ ಬದುಕಿಗೂ ಹೊಸ ಪ್ರೇರಣೆ ನೀಡಿದೆ, ಇದರಲ್ಲಿ ಪಾಲ್ಗೊಂಡು ನಾನೂ ಸಂತೃಪ್ತನಾಗಿದ್ದೇನೆ, ಸರ್ವಶಕ್ತನ ಅನುಗ್ರಹದೊಂದಿಗೆ ೧೨೫ನೇ ವರ್ಷದ ಎಲ್ಲಾ ಕಾರ್ಯಕ್ರಮಗಳೂ ಯಶಸ್ವಿಯಾಗಲಿ ಎಂದು ಕರ್ನಾಟಕದ ಆರ್ಚ್ ಬಿಷಪ್  ಡಾ| ಪೀಟರ್ ಮಚಾದೊ ಹಾರೈಸಿದ್ದಾರೆ.

17-05-35-IMG-20190520-WA0247-768x512
ಶತಮಾನೋತ್ತರ ಬೆಳ್ಳಿಹಬ್ಬದ ಸಂಭ್ರಮದಲ್ಲಿರುವ ಬೊರಿಮಾರ್ ಚರ್ಚ್‌ಗೆ  ಭೇಟಿ ನೀಡಿದ ಅವರು, ದಿವ್ಯ ಬಲಿಪೂಜೆ ಹಾಗೂ ಕಮ್ಯುನಿಯನ್ ಡೇ ಎಂಬ ಪವಿತ್ರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಆಶೀರ್ವಚನ ನೀಡಿದರು. ಶತಮಾನೋತ್ತರ ಬೆಳ್ಳಿಹಬ್ಬದ ಸಂಭ್ರಮದ ಅಂಗವಾಗಿ ಪ್ರತೀ ತಿಂಗಳು ಮಾದರಿಯಾದ ಧಾರ್ಮಿಕ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿರುವ ಚರ್ಚಿನ ಧರ್ಮಗುರು ಹಾಗೂ ಪಾಲನಾ ಮಂಡಳಿಯನ್ನು ಅಭಿನಂದಿಸಿದ ಅವರು, ಮುಂದೆಯೂ ಇಂತಹಾ ಕಾರ್ಯಕ್ರಮಗಳು ನಿರಂತರವಾಗಿ ನಡೆಯಲಿ ಎಂದರು.

ಮಕ್ಕಳಾದ ಐಶಲ್ ಮಾರ್ಟಿಸ್, ಲೆನೊರಾ ಸಾನ್ಸಿಯಾ ಪಿಂಟೊ, ನತಾಶ ಮೆಂಡೊನ್ಸಾ, ಒಲಿಶಾ ನೊರೊನ್ಹಾ, ರಿಯೋನ್ ಪಾವ್ಲ್ ಮಾರ್ಟಿಸ್ ಹಾಗೂ ಶರುನ್ ರೊಡ್ರಿಗಸ್ ಅವರಿಗೆ ಪ್ರಪ್ರಥಮ ಬಾರಿಗೆ ಪರಮ ಪ್ರಸಾದ ನೀಡಿ ಹರಸಿದ ಅವರು, ಉನ್ನತ ಆದರ್ಶಗಳೊಂದಿಗೆ ಜೀವನ ಸಾಗಿಸಲು ಕರೆ ನೀಡಿದರು.       ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ   ಡಾ. ಲಾರೆನ್ಸ್ ಮುಕ್ಕುಝಿ ಯವರು ಮಾತನಾಡಿ, ಆರ್ಚ್ ಬಿಷಪ್ ಭೇಟಿಯ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮನಸ್ಸು ತುಂಬಿ ಬಂದಿದೆ. ಇದೆಲ್ಲವೂ ದಯಾಮಯನಾದ ಸರ್ವಶ. ಪರಮಪ್ರಸಾದ ಸ್ವೀಕರಿಸಿದ ಮಕ್ಕಳ ಬದುಕು ಉಜ್ವಲವಾಗಲಿ ಎಂದು ಹಾರೈಸಿದರು.

ಪುತ್ತೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ  ಬಿಷಪ್ ಡಾ. ಗೀವರ್ಗೀಸ್ ಮಾರ್ ಮಕಾರಿಯೋಸ್, ಚರ್ಚ್ ನ ಪ್ರಧಾನ ಧರ್ಮಗುರುಗಳಾದ ವಂದನೀಯ ಗ್ರೆಗರಿ ಪಿರೇರಾ ಹಾಗೂ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷರಾದ ರೋಷನ್ ಬೊನಿಫಾಸ್ ಮಾರ್ಟಿಸ್ , ಕಾರ್ಯದರ್ಶಿ ಪ್ರೀತಿ ಲ್ಯಾನ್ಸಿ ಪಿರೇರಾ, ಶಿಕ್ಷಕಿ ಮೇರಿ ಡಿಸೋಜ ಮತ್ತಿತರರು ಉಪಸ್ಥಿತರಿದ್ದರು. ಸ್ಟೇನಿ ಡಿಸೋಜ ಮತ್ತು ಇವ್ಲೀನ್ ಡಿಸೋಜ ಕಾರ್ಯಕ್ರಮ ನಿರೂಪಿಸಿದರು.

By suddi9

Leave a Reply

Your email address will not be published. Required fields are marked *