ಸುದ್ದಿ9 ಬಂಟ್ವಾಳ : ಶ್ರೀ ಕ್ಷೇ.ಧ.ಗ್ರಾ.ಯೋ.ಬಂಟ್ವಾಳ ವಲಯ ಹಾಗೂ ಬಂಟ್ವಾಳ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಇದರ ಸಹಯೋಗದೊಂದಿಗೆ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಸರಪಾಡಿ ಸ.ಪ್ರೌ.ಶಾಲೆಯಲ್ಲಿ ಜರಗಿತು.
ವಲಯ ಜನಜಾಗೃತಿ ವೇದಿಕೆ ಅಧ್ಯಕ್ಷ ಪ್ರಮೋದ್ ಕುಮಾರ್ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ದುಶ್ಚಟಗಳ ಬಗ್ಗೆ ವಿದ್ಯಾರ್ಥಿ ದೆಸೆಯಲ್ಲಿ ಅರಿವು ಅವಶ್ಯಕವಾಗಿದ್ದು ಇಂತಹ ಕಾರ್ಯಕ್ರಮಗಳು ಪೂರಕವಾಗಿದೆ. ವಿದ್ಯಾರ್ಥಿ ಗಳು ದುಶ್ಚಟಗಳಿಗೆ ಮಾರುಹೋಗದೆ ತಮ್ಮ ಭವಿಷ್ಯವನ್ನು ಸದೃಢಗೊಳಿಸಬೇಕು ಎಂದು ಹೇಳಿದರು. ಜನಜಾಗೃತಿ ವೇದಿಕೆ ಉಪಾಧ್ಯಕ್ಷ ಪದ್ಮಪ್ಪ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ತಾ|ಆರೋಗ್ಯ ಇಲಾಖೆಯ ಮಲೇರಿಯ ಪರಿವೀಕ್ಷಕ ಜಯರಾಮ ಅವರು ಮಾತನಾಡಿ ಆರೋಗ್ಯ ಮತ್ತು ಆಹಾರ ಪದ್ಧತಿಯ ಬಗ್ಗೆ ಮತ್ತು ದುಶ್ಚಟಗಳ ಬಗ್ಗೆ ಜಾಗೃತಿ ಮೂಡಿಸುವ ಮಾಹಿತಿ ನೀಡಿದರು. ಗ್ರಾ.ಪಂ.ಸದಸ್ಯರಾದ ವಾಣಿ ಗಣೇಶ, ಶ್ರೀಧರ ಪೂಜಾರಿ, ಒಕ್ಕೂಟದ ಅಧ್ಯಕ್ಷ ಹರಿಯಪ್ಪ ಉಪಸ್ಥಿತರಿದ್ದರು.
ಸ.ಪ್ರೌ.ಶಾಲಾ ಮುಖ್ಯಶಿಕ್ಷಕ ಉದಯ ಕುಮಾರ್ ಜೈನ್ ಸ್ವಾಗತಿಸಿದರು. ಮೇಲ್ವಿಚಾರಕ ವಸಂತ ಸಾಲಿಯಾನ್ ಪ್ರಸ್ತಾವಿಸಿ ಕಾರ್ಯಕ್ರಮ ನಿರೂಪಿಸಿದರು.

 

11-1

 

 

By Suddi9

Leave a Reply

Your email address will not be published. Required fields are marked *