ಬಂಟ್ವಾಳ, : ಯೂತ್ ಕಾಂಗ್ರೆಸ್‌ನ ಜಿಲ್ಲಾಧ್ಯಕ್ಷ, ದ.ಕ. ಕ್ಷೇತ್ರದ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಮಿಥುನ್ ರೈಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ ಹಾಗೂ ಕೊಲೆ ಬೆದರಿಕೆವೊಡ್ಡಿರುವ ಬಿಜೆಪಿ ಕಾರ್ಯಕರ್ತರ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳುವಂತೆ ಬಂಟ್ವಾಳ ಕಾಂಗ್ರೆಸ್ ಸಮಿತಿಯು ಸೋಮವಾರ ಪೊಲೀಸ್ ಠಾಣೆಗೆ ದೂರು ನೀಡಿದೆ.
ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಅವರು ಬಂಟ್ವಾಳ ಗ್ರಾಮಾಂತರ ಠಾಣೆಗೆ ಈ ದೂರು ನೀಡಿದ್ದು, ತಪ್ಪಿತಸ್ಥರನ್ನು ಕಾನೂನು ಕ್ರಮಕೈಗೊಳ್ಳುವಂತೆ ತಿಳಿಸಿದ್ದಾರೆ.
