ಬಂಟ್ವಾಳ : ವಕೀಲರ ಸಂಘ ಇದರ ವತಿಯಿಂದ ಬಂಟ್ವಾಳ ಪ್ರಿನ್ಸಿಪಾಲ್ ಸಿವಿಲ್ ಜಡ್ಜ್ ಜೂನಿಯರ್ ಡಿವಿಜನ್ ನ್ಯಾಯಾಲಯಕ್ಕೆ ನ್ಯಾಯಾಧೀಶೆಯಾಗಿ ಅಧಿಕಾರ ಸ್ವೀಕರಿಸಿದ ಶ್ರೀಮತಿ ರಮ್ಯಾರವರನ್ನು ಸ್ವಾಗತಿಸಲಾಯಿತು. ವಕೀಲರ ಸಂಘದ ಅಧ್ಯಕ್ಷ ದೀಪಕ್ ಕುಮಾರ್ ಜೈನ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪ್ರಧಾನ ಸಿವಿಲ್ ನ್ಯಾಯಾಧೀ ಶರಾದ ಮಹಮ್ಮದ್ ಇಮ್ತಿಯಾಝ್ ಅಹಮ್ಮದ್, ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಶಿಲ್ಪಾ ಜಿ.ತಿಮ್ಮಾಪುರ್ , ಮಾಜಿ ಅಧ್ಯಕ್ಷ ಅಶ್ವನಿ ಕುಮಾರ್ ರೈ, ನ್ಯಾಯವಾದಿ ವೀರೇಂದ್ರ ಎಂ ಸಿದ್ದಕಟ್ಟೆ ಉಪಸ್ಥಿತರಿದ್ದರು.

