ವಿಟ್ಲ: ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2019-20 ಸಾಲಿನ ಶಾಲಾ ಪ್ರಾರಂಭೋತ್ಸವವನ್ನು ಗುರುವಾರ ವಿಭಿನ್ನವಾಗಿ ಆಚರಿಸಲಾಯಿತು. ಶಾಲೆಗೆ ಹೊಸದಾಗಿ ಸೇರ್ಪಡೆಗೊಂಡ ಹಾಗೂ ಎಲ್.ಕೆ.ಜಿ ವಿಭಾಗದ ಪುಟಾಣಿಗಳನ್ನು ಮೆರವಣಿಗೆಯ ಮೂಲಕ ಶಾಲೆಗೆ ಕರೆತಂದು ಆರತಿ ಬೆಳಗಿ, ತಿಲಕ ಹಚ್ಚಿ ಪ್ರೀತಿಪೂರ್ವಕವಾಗಿ ಬರಮಾಡಿಕೊಳ್ಳಲಾಯಿತು.

IMG_2631
ಮಾಣಿ ಶ್ರೀ ಉಳ್ಳಾಲ್ತಿ ದೈವಸ್ಥಾನದ ಮೊಕ್ತೇಸರರಾದ ಸಚಿನ್ ರೈ ಮಾಣಿಗುತ್ತು ಇವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪ್ರಾಸ್ತಾವಿಕ ಮಾತುಗಳನ್ನಾಡಿದ ಶಾಲಾ ಆಡಳಿತಾಧಿಕಾರಿ ಶ್ರೀ.ಸಿ.ಶ್ರೀಧರ್ ಪ್ರಸ್ತುತ ಈ ವರ್ಷದ ಎಸ್.ಎಸ್.ಎಲ್.ಸಿ ಫಲಿತಾಂಶವು ಸಹೃದಯಿ ಪೋಷಕರ ಪ್ರೋತ್ಸಾಹ, ಹಾಗೂ ಅಹರ್ನಿಶಿ ದುಡಿದ ಶಿಕ್ಷಕ ವರ್ಗದ ಶ್ರಮದ ಫಲವಾಗಿದೆ. ವಿದ್ಯಾರ್ಥಿಗಳು, ಶೈಕ್ಷಣಿಕವಾಗಿ ಮಾತ್ರವಲ್ಲದೆ ಸಾಂಸ್ಕ್ರತಿಕವಾಗಿಯೂ ಪ್ರಬುದ್ದರಾಗಿರಬೇಕು ಎಂಬ ಉನ್ನತ ಉದ್ದೇಶದಿಂದ ಪಠ್ಯದೊಂದಿಗೆ ಸಹಪಠ್ಯ ಚಟುವಟಿಕೆಗಳನ್ನೂ ನಾವು ಅಳವಡಿಸಿಕೊಂಡಿದ್ದೇವೆ ಎಂದರು.

IMG_2610
ಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಶ್ರೀ ಬಾಲಕೃಷ್ಣ ಆಳ್ವ ಮಾತನಾಡಿ ನಮ್ಮ ವಿದ್ಯಾಸಂಸ್ಥೆ ತಾಲೂಕು, ಜಿಲ್ಲೆ, ರಾಜ್ಯಮಟ್ಟದಲ್ಲಿ ಗುರುತಿಸಿಕೊಳ್ಳುತ್ತಿರುವುದು ನಮ್ಮ ಸಂಸ್ಥೆಯ ಕಾರ್ಯವೈಖರಿಗೆ ನಿದರ್ಶನವಾಗಿದೆ. ಸಂಸ್ಥೆಯ ಅಭಿವೃದ್ಧಿಯ ದೃಷ್ಟಿಯಿಂದ ಶಾಲಾ ಶಿಕ್ಷಕ ವರ್ಗ, ಆಡಳಿತವರ್ಗ ಹಮ್ಮಿಕೊಳ್ಳುವ ಎಲ್ಲಾ ಕಾರ್ಯಕ್ರಮಗಳಿಗೆ ಶಿಕ್ಷಕ ರಕ್ಷಕ ಸಂಘ ಪೂರಕವಾಗಿ ಸದಾ ಸಹಕರಿಸುತ್ತದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲಾ ಸಂಚಾಲಕರಾದ ಶ್ರೀ.ಜೆ.ಪ್ರಹ್ಲಾದ್ ಶೆಟ್ಟಿ ಮಾತನಾಡಿ ನಮ್ಮ ವಿದ್ಯಾರ್ಥಿಗಳ ಭಾವೀಜೀವನಕ್ಕೆ ಭದ್ರ ಅಡಿಪಾಯ ಹಾಕುವ ಆಕಾಂಕ್ಷೆ ನಮ್ಮದು. ಈ ನಿಟ್ಟಿನಲ್ಲಿ ಮಕ್ಕಳ ವಿದ್ಯಾರ್ಜನೆಗೆ ಪೂರಕವಾಗಿ ಸ್ಪಂದಿಸುವಂತಹ ಕಾರ್ಯಚಟುವಟಿಕೆಗಳನ್ನು ಹಮ್ಮಿಕೊಳ್ಳುವಲ್ಲಿ ಸಂಸ್ಥೆ ಸದಾ ಸನ್ನದ್ಧವಾಗಿದೆ ಎಂದರು.
ಆಡಳಿತ ಮಂಡಳಿಯ ಕಾರ್ಯದರ್ಶಿ ಕೊಂಬಿಲ ನಾರಾಯಣ ಶೆಟ್ಟಿ ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷೆ ಲಕ್ಷೀ ಉಪಸ್ಥಿತರಿದ್ದರು. ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ವಿಜಯಲಕ್ಷೀ ವಿ ಶೆಟ್ಟಿ ಸ್ವಾಗತಿಸಿ, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಗ್ರೇಸ್ .ಪಿ.ಸಲ್ದಾನಾ ವಂದಿಸಿದರು. ಶಿಕ್ಷಕಿಯರಾದ ಮಮತಾ, ರಶ್ಮಿ ಫೆರ್ನಾಂಡಿಸ್ ಕಾರ್ಯಕ್ರಮ ನಿರೂಪಿಸಿದರು.
ಬಳಿಕ ನಡೆದ ಸಾಂಸ್ಕ್ರತಿಕ ಕಾರ್ಯಕ್ರಮದಲ್ಲಿ ಭರತನಾಟ್ಯ, ಸಮೂಹಗೀತೆ, ಹಾಗೂ ಬಾಲಕೃಷ್ಣ ಪೂಜಾರಿ ಉಡ್ಡಂಗಳ ನಿರ್ದೇಶನದಲ್ಲಿ ‘ದ್ರುಪದ ಗರ್ವಭಂಗ’ ಎಂಬ ಯಕ್ಷಗಾನ ಪ್ರಸಂಗವನ್ನು ವಿದ್ಯಾರ್ಥಿಗಳು ಪ್ರದರ್ಶಿಸಿದರು.

By suddi9

Leave a Reply

Your email address will not be published. Required fields are marked *