ಬಂಟ್ವಾಳ ತಾಲ್ಲೂಕಿನ ಕೊಯಿಲ ಸರ್ಕಾರಿ ಪ್ರೌಢಶಾಲೆಯಲ್ಲಿ ಬುಧವಾರ ಏರ್ಪಡಿಸಿದ್ದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಿಸಲಾಯಿತು. ಮುಖ್ಯಶಿಕ್ಷಕ ಸುಧೀರ್ ಜಿ., ಶಾಲಾಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಎಂ.ದುರ್ಗಾದಾಸ ಶೆಟ್ಟಿ, ಸದಸ್ಯರಾದ ವಸಂತ ಕುಮಾರ್ ಅಣ್ಣಳಿಕೆ, ಪ್ರಶಾಂತ ಶೆಟ್ಟಿ ಕೊಯಿಲ, ಸಂತೋಷ್ ಕುಮಾರ್ ಬೆಟ್ಟು, ದಿನೇಶ ಶೆಟ್ಟಿ, ಮಂಜಪ್ಪ, ಕೆ.ಪರಮೇಶ್ವರ ಪೂಜಾರಿ ಸಹಿತ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಪೋಷಕರು ಪಾಲ್ಗೊಂಡಿದ್ದರು.

