ಬಂಟ್ವಾಳ ತಾಲೂಕು ಬಡಗಬೆಳ್ಳೂರು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಮೇಲ್ಛಾವಣಿ ದುರಸ್ತಿಯನ್ನು ಶಾಲಾಭಿವೃದ್ಧಿ ಸಮಿತಿ ಹಾಗೂ ಊರವರ ಶ್ರಮದಾನದಿಂದ ನಡೆಸಲಾಯಿತು.
ಮಳೆಗಾಲದ ಹಿನ್ನೆಲೆಯಲ್ಲಿ ಶಾಲೆ ಆರಂಭವಾಗುವ ಮೊದಲಿನ ದಿನ ಸುಮಾರು ಎರಡು ಲಕ್ಷ ರೂ. ವೆಚ್ಚದಲ್ಲಿ ದುರಸ್ತಿ ಕಾಮಗಾರಿಯನ್ನು ಮಾಡಲಾಯಿತು.

ಮುಂದಿನ ವರ್ಷ ಶತಮಾನೋತ್ಸವ ಆಚರಿಸುತ್ತಿರುವ ಈ ಶಾಲೆಯ ಅಭಿವೃದ್ಧಿಗೆ ಈಗಾಗಲೇ ಎಲ್ಲರೂ ಸಂಕಲ್ಪ ಮಾಡಿದ್ದು, ಇದಕ್ಕಾಗಿ ಶತಮಾನೋತ್ಸವ ಸಮಿತಿ, ಕಟ್ಟಡ ನಿರ್ಮಾಣ ಸಮಿತಿಯನ್ನು ರಚಿಸಲಾಗಿದೆ. ಸಮಿತಿಗಳು ಈಗಾಗಲೇ ಎರಡು ಸುತ್ತಿನ ಸಭೆಯನ್ನು ನಡೆಸಿ ಸುಮಾರು 50 ಲಕ್ಷ ರೂ. ವೆಚ್ಚದಲ್ಲಿ ಶಾಲಾ ಕೊಠಡಿ ಸೇರಿದಂತೆ ನಾನಾ ಅಭಿವೃದ್ಧಿ ಕಾಮಗಾರಿಯನ್ನು ನಡೆಸಲು ಉದ್ದೇಶಿಸಲಾಗಿದೆ.
