ಬಂಟ್ವಾಳ ತಾಲ್ಲೂಕಿನ ಸರಪಾಡಿ ಸಮೀಪದ ಪೆರ್ಲ ಬೀಯಪಾದೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾಭಿವೃದ್ಧಿ ಸಮಿತಿ ಮೇಲುಸ್ತುವಾರಿ ಮತ್ತು ಹಳೆವಿದ್ಯಾರ್ಥಿ ಸಂಘದ ವತಿಯಿಂದ ವಿದ್ಯಾರ್ಥಿ ಗಳಿಗೆ ಶನಿವಾರ ಉಚಿತ ಪುಸ್ತಕ ವಿತರಿಸಲಾಯಿತು.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೀಲಾವತಿ, ಸದಸ್ಯ ನಾಣ್ಯಪ್ಪ ಪೂಜಾರಿ, ಮಾಜಿ ಸದಸ್ಯ ಲೋಕೇಶ ಪೂಜಾರಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಉಮೇಶ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕೃಷ್ಣಪ್ಪ, ಮುಖ್ಯಶಿಕ್ಷಕ ಸುರೇಂದ್ರ, ಸಹಶಿಕ್ಷಕ ಉಮೇಶ್ ಮತ್ತಿತರರು ಇದ್ದರು
