ಬಂಟ್ವಾಳ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕ್ಅಪ್ ವಾಹನವನ್ನು ಹಿಂದು ಸಂಘಟನೆಯ ಕಾರ್ಯಕರ್ತರು ಬಂಟ್ವಾಳ ಕಸ್ಬಾ ಗ್ರಾಮದ ತುಂಬೆ ಎಂಬಲ್ಲಿ ಪತ್ತೆ ಹಚ್ಚಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿಗಳ ಪೈಕಿ ಓರ್ವಾವ ಸೆರೆಯಾಗಿದ್ದು, ಉಳಿದವರು ಪರಾರಿಯಾಗಿದ್ದಾರೆ.
ಚಲಾಯಿಸುತ್ತಿದ್ದ ಆರೋಪಿ ಐವನ್ ಡಿ ಸೋಜಾ ಎಂಬಾತನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದು, ಉಳಿದ ಆರೋಪಿಗಳಾದ ತಸ್ಲಿಂ, ಬಶೀರ್, ಅಶೋಕ ಎಂಬವರು ಪರಾರಿಯಾಗಿದ್ದಾರೆ. 2 ಹಸು, 3 ಕರು, ಪಿಕ್‌ಅಪ್ ವಾಹನ ಸೇರಿದಂತೆ 3.36 ಲಕ್ಷ ಮೌಲ್ಯದ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ವಗ್ಗ ಕಡೆಯಿಂದ ಬಿ.ಸಿ.ರೋಡು ಕಡೆಗೆ ಬರುತ್ತಿದ್ದ ಪಿಕ್ಅಪ್ ವಾಹನದಲ್ಲಿ ಜಾನುವಾರುಗಳನ್ನು ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದೆ ಎನ್ನುವ ಬಗ್ಗೆ ಮಾಹಿತಿ ಪಡೆದ ಹಿಂದೂ ಸಂಘಟನೆಯ ಕಾರ್ಯಕರ್ತರು ತುಂಬೆ ಎಂಬಲ್ಲಿ ವಾಹನ ತಡೆ ಹಿಡಿದು ಪರಿಶೀಲಿಸಿದಾಗ ಹಿಂಸಾತ್ಮಕವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಕ್ಷಣ ಪೊಲಿಸರಿಗೆ ಮಾಹಿತಿ ನೀಡಲಾಗಿದ್ದು ಪೊಲೀಸರು ಸ್ಥಳಕ್ಕೆ ತಲುವ ವೇಳೆಗೆ ವಾಹನ ಚಾಲಕನನ್ನು ಹೊರತುಪಡಿಸಿ ಇತರ ಮೂವರು ತಪ್ಪಿಸಿಕೊಂಡಿದ್ದಾರೆ. ಜಾನುವಾರುಗಳನ್ನು ಕದ್ದು ಮಂಗಳೂರಿನ ಕಸಾಯಿಖಾನೆಗೆ ಅಕ್ರಮ ಸಾಗಾಟ ಮಾಡುತ್ತಿರುವ ಬಗ್ಗೆ ವಿಚಾರಣೆಯ ವೇಳೆ ತಿಳಿದು ಬಂದಿದೆ. ತಮ್ಮ ಮೇಲೆ ಐದರಿಂದ ಆರು ಮಂದಿ ಇದ್ದ ತಂಡ ಅವಾಚ್ಯವಾಗಿ ನಿಂದಿಸಿ ಜೀವಬೆದರಿಕೆ ಒಡ್ಡಿರುವುದಾಗಿ ಆರೋಪಿ ಐವನ್ ಡಿ ಸೋಜಾ ಬಂಟ್ವಾಳ ನಗರ ಪೊಲೀಸ್ ಠಾಣೆಗೆ ಪ್ರತಿದೂರು ನೀಡಿದ್ದಾರೆ


