ಚಿಕ್ಕಬಳ್ಳಾಪುರ: ತಾಲ್ಲೂಕಿನ ನಾಯನಹಳ್ಳಿಯಲ್ಲಿ ಕಳೆದ ಮೂರು ವರ್ಷಗಳಿಂದ ಸಾವಯವ ದೇಸಿ ಪದ್ಧತಿಯಲ್ಲಿ ರಾಸಾಯನಿಕ ಗೊಬ್ಬರ ಮುಕ್ತ ದ್ರಾಕ್ಷಿ ಬೆಳೆಯುತ್ತಿರುವ ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆರ್.ಆಂಜನೇಯರೆಡ್ಡಿ ಅವರ ತೋಟಕ್ಕೆ ಶನಿವಾರ ಜಪಾನ್‌ನ ಕೆಲ ಪ್ರಗತಿಪರ ರೈತರು ಭೇಟಿ ನೀಡಿ ಮಾಹಿತಿ ಪಡೆದರು.

