ಬಂಟ್ವಾಳ: ಬಾಳ್ತಿಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವವು ವಿವಿಧ ಚಟುವಟಿಕೆಗಳೊಂದಿಗೆ ನಡೆಯಿತು.
ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ವಸಂತ ಸಾಲ್ಯಾನ್ ಕಾರ್ಯಕ್ರಮ ಉದ್ಘಾಟಿಸಿದರು.
IMG-20190610-WA0010
ಸರಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವಲ್ಲಿ ಶಿಕ್ಷಕರು, ಪೋಷಕರು ಹಾಗೂ ಸಮುದಾಯದ ಪಾತ್ರ ಹಿರಿದಾದುದು. ಈ ಶಾಲೆಯಲ್ಲಿಯೂ ಕಳೆದ ಮೂರು ವರ್ಷಗಳಿಂದ ಎಲ್ ಕೆ ಜಿ ಮತ್ತು ಯುಕೆಜಿ ತರಗತಿಗಳು ಯಶಸ್ಚಿಯಾಗಿ ನಡೆಯುತ್ತಿದ್ದು ಈ ನಿಟ್ಟಿನಲ್ಲಿ ಈ ಬಾರಿ ಈ ಶಾಲೆಯಲ್ಲಿ ದಾಖಲಾತಿಯೂ ಹೆಚ್ಚಳವಾಗಿರುವುದು ಶ್ಲಾಘನಾರ್ಹ ಎಂದರು.ಪಂಚಾಯತು ಉಪಾಧ್ಯಕ್ಷೆ ಪೂರ್ಣಿಮ, ಎಸ್ ಡಿ ಎಂ ಸಿ ಉಪಾಧ್ಯಕ್ಷೆ ಪ್ರಕಾಶಿನಿ, ಸದಸ್ಯರಾದ ಮಲ್ಲಿಕಾ, ಹೇಮಾವತಿ, ಗುಲಾಬಿ ಮೊದಲಾದವರಿದ್ದರು. ಮುಖ್ಯ ಶಿಕ್ಷಕಿ ಪ್ರೇಮಾ ಕುಮಾರಿ ಸ್ವಾಗತಿಸಿದರು. ಶಿಕ್ಷಕಿ ರೇಷ್ಮಾ ವಂದಿಸಿದರು. ಶಿಕ್ಷಕ ಸಂತೋಷ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

By Suddi9

Leave a Reply

Your email address will not be published. Required fields are marked *