ಮೂಡುಬಿದಿರೆ: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಳಿಬೆಟ್ಟು ಇಲ್ಲಿನ ವಿದ್ಯಾರ್ಥಿಗಳಿಗೆ ಉದ್ಯಮಿ ರಂಜಿತ್ ಪೂಜಾರಿ ಕೊಡಮಾಡಿದ ಉಚಿತ ನೋಟ್ ಪುಸ್ತಕಗಳನ್ನು ಇರುವೈಲ್ ಗ್ರಾಮ ಪಂಚಾಯಿತಿ ಸದಸ್ಯ ವಲೇರಿಯನ್ ಕುಟಿನ್ಹ ಗುರುವಾರ ವಿತರಿಸಿದರು.
ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಪದ್ಮನಾಭ ಕುಲಾಲ್ ಶುಭ ಹಾರೈಸಿದರು. ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ಮೋಹಿನಿ, ವಿದ್ಯಾಭಿಮಾನಿ ದಯಾನಂದ ಪೂಜಾರಿ, ಶಿಕ್ಷಕ ವೃಂದ,
ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು.
ಮುಖ್ಯ ಶಿಕ್ಷಕಿ ಪ್ರಮೀಳಾ ಪಿಂಟೋ ಸ್ವಾಗತಿಸಿದರು. ಶಿಕ್ಷಕಿ ಸುನೀತಾ ಕಾರ್ಯಕ್ರಮ ನಿರೂಪಿಸಿ, ಗೀತಾ ವಂದಿಸಿದರು.

