ಮೂಡುಬಿದಿರೆ: ನಲಿಕೆಯವರ ಯುವ ವೇದಿಕೆ ಮೂಡುಬಿದಿರೆ ವಲಯ ಇದರ ವತಿಯಿಂದ ವಲಯದ ಸ್ವಜಾತಿ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮವು ಭಾನುವಾರ ಸಮಾಜ ಮಂದಿರ ಸಭಾದಲ್ಲಿ ನಡೆಯಿತು.

Nalike
ರಾಜ್ಯ ಪ್ರಶಸ್ತಿ ಪುರಸ್ಕøತ ಹಿರಿಯ ದೈವ ನರ್ತಕ ಬಾಬು ಸಾಲ್ಯಾನ್ ಬೋಳ ಕಾರ್ಯಕ್ರಮವನ್ನು ಉದ್ಘಾಟಿಸಿ ನಂತರ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಿಸಿ ಮಾತನಾಡಿ ಶುಭ ಹಾರೈಸಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಭೂತರಾಧನೆ ಸಮಿತಿಯ ಅಧ್ಯಕ್ಷ ಎನ್.ಕೆ.ಸಾಲ್ಯಾನ್ ಮಾರೂರು ಮಾತನಾಡಿ, ಯುವಕರು ವಿದ್ಯೆಗೆ ನೀಡುತ್ತಿರುವ ಪ್ರೋತ್ಸಾಹದ ಬಗ್ಗೆ ಹೆಮ್ಮೆ ಎನಿಸುತ್ತಿದೆ. ಕಳೆದ ಎರಡು ವರ್ಷಗಳಿಂದ ಯುವ ವೇದಿಕೆಯು ಉತ್ತಮ ಕೆಲಸಗಳನ್ನು ಮಾಡುತ್ತಾ ಬರುತ್ತಿದ್ದು ಇಂತಹ ಕೆಲಸಗಳು ಇನ್ನೂ ಹೆಚ್ಚಿನ ರೀತಿಗಳಲ್ಲಿ ಆಗಬೇಕು ಎಂದು ಹೇಳಿದರು.
ನಲಿಕೆಯವರ ಸಮಾಜ ಸೇವಾ ಸಂಘದ ಜಿಲ್ಲಾ ಗೌರವಾಧ್ಯಕ್ಷ ಯಂ.ಡಿ ವೆಂಕಪ್ಪ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ನಮ್ಮ ಸಮಾಜದಲ್ಲಿ ಹುಡುಗಿಯರು ವಿದ್ಯೆಗೆ ಮಹತ್ವ ನೀಡಿದಂತೆ ಹುಡುಗರು ಗಮನ ನೀಡದೆ ದುಶ್ಚಟಗಳಿಗೆ ಬಲಿಯಾಗುತ್ತಿರುವುದು ಬೇಸರದ ಸಂಗತಿ ಎಂದ ಅವರು ನಾವು ಉತ್ತಮ ಸಂಸ್ಕಾರವನ್ನು ಬೆಳೆಸಿಕೊಂಡು ಸದೃಢ ಸಮಾಜದ ನಿರ್ಮಾಣಕ್ಕೆ ಶ್ರಮಿಸಬೇಕಾಗಿದೆ ಎಂದರು.
ಅಳಿಯೂರು ಪಾಣಾರ ಸಂಘದ ಪ್ರಧಾನ ಕಾರ್ಯದರ್ಶಿ ಶಿವಾನಂದ ಪಾಂಡ್ರು, ಜಿಲ್ಲಾ ಯುವ ವೇದಿಕೆಯ ಅಧ್ಯಕ್ಷ ಸುಬ್ರಾಯ ಕಲ್ಮಂಜ, ಪಾಣಾರ ಸಂಘದ ಮಾಜಿ ಅಧ್ಯಕ್ಷ ನೋಣಯ್ಯ ಬಂಗೇರಾ ಅತಿಥಿಗಳಾಗಿ ಭಾಗವಹಿಸಿದ್ದರು.
ಮೂಡುಬಿದಿರೆ ವಲಯದ ನಲಿಕೆಯವರ ಯುವ ವೇದಿಕೆಯ ಅಧ್ಯಕ್ಷ ಸಂಜಯಕುಮಾರ್ ಲಾಡಿ ಅಧ್ಯಕ್ಷತೆ ವಹಿಸಿ ವಾರ್ಷಿಕ ವರದಿ ನೀಡಿದರು. ಜೊತೆ ಕಾರ್ಯದರ್ಶಿ ದಯಾನಂದ ಕಾರ್ಯಕ್ರಮ ನಿರೂಪಿಸಿದರು. ಧನಂಜಯ ವಂದಿಸಿದರು.
92 ವಿದ್ಯಾರ್ಥಿಗಳಿಗೆ 32,000 ವೆಚ್ಚದ ಪುಸ್ತಕಗಳನ್ನು ವಿತರಿಸಲಾಯಿತು.

By Suddi9

Leave a Reply

Your email address will not be published. Required fields are marked *