ಮಂಗಳೂರು:ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮಂಗಳೂರು ದಕ್ಷಿಣ ವಲಯ ಮತ್ತು ಎಸ್.ಡಿ.ಎಂ. ಮಂಗಳಜ್ಯೋತಿ ಸಮಗ್ರ ಶಾಲೆ ವಾಮಂಜೂರು ಇವರ ಆಶ್ರಯದಲ್ಲಿ ಮಂಗಳೂರು ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿದ್ಯಾರ್ಥಿಗಳಿಂದ 5ನೇ ವಿಶ್ವ ಯೋಗ ದಿನಾಚರಣೆ ಮತ್ತು ಸಾಮೂಹಿಕ ಯೋಗಾಭ್ಯಾಸ ನಡೆಯಿತು.

9A2A7818 ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಪ್ರದೀಪ್ ಕುಮಾರ್ ಕಲ್ಕೂರ್ ಭಾಗವಹಿಸಿ ಭೋಗ ಜೀವನವನ್ನು ತ್ಯಜಿಸಿ ಯೋಗ ಜೀವನವನ್ನು ಅಳವಡಿಸಿ ರೋಗ ಮುಕ್ತ ಸಮಾಜವನ್ನು ನಿರ್ಮಿಸಿ ಭಾರತೀಯ ಸಂಸ್ಕøತಿಯನ್ನು ಉಳಿಸಿ ಬೆಳೆಸಿಕೊಳ್ಳುವ ಪ್ರಯತ್ನವನ್ನು ನಾವು ಮಾಡಬೇಕಾಗಿದೆ. ನಾವು ಪದವಿ ಪಡೆಯುವುದು ಮುಖ್ಯವಲ್ಲ.

9A2A7873ನಮ್ಮ ಜೀವನವನ್ನು ರೂಪಿಸುವ ಕೌಶಲ್ಯಗಳನ್ನು ಬೆಳೆಸಿಕೊಂಡರೆ ಸಾರ್ಥಕ ಬದುಕನ್ನು ನಡೆಸಬೇಕು. ನಿತ್ಯ ಯೋಗಾಭ್ಯಾಸ ಮಾಡುವುದರಿಂದ ನಮ್ಮನ್ನು ನಾವು ಅರಿತುಕೊಂಡು ಸುಖಿ ಆನಂದದಾಯಕ ಜೀವನವನ್ನು ನಡೆಸುವುದರ ಮುಖಾಂತರ ಸ್ವಸ್ಥ ಸಮಾಜ ಮತ್ತು ಶಾಂತಿ ಸಹಬಾಳ್ವೆಯ ಬದುಕನ್ನು ರೂಪಿಸಲು ಸಹಾಯಕವಾಗಿದೆ ಎಂದರು.ಸಭೆಯ ಅಧ್ಯಕ್ಷ ಸ್ಥಾನವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ವಹಿಸಿಕೊಂಡು ಪಠ್ಯದ ಜೊತೆಗೆ ನಿರಂತರ ಯೋಗಾಭ್ಯಾಸ ಮತ್ತು ಪ್ರಾಣಾಯಾಮವನ್ನು ಅಭ್ಯಾಸ ಮಾಡಿಕೊಂಡರೆ ಮನಸ್ಸು ಪುಳಕಿತವಾಗಿ ಜ್ಞಾನಾರ್ಜನೆಗೆ ಸಹಕಾರಿಯಾಗುತ್ತದೆ.

9A2A7919ಪ್ರಥಮ ಬಾರಿಗೆ ಮಂಗಳೂರು ತಾಲೂಕು ಮಟ್ಟದಲ್ಲಿ ಆಯ್ದ ವಿದ್ಯಾರ್ಥಿಗಳನ್ನು ಸೇರಿಸಿಕೊಂಡು ಈ ಕಾರ್ಯಕ್ರಮ ನಡೆಸಲು ಪ್ರೋತ್ಸಾಹ ನೀಡಿದ ಶಾಲೆಗಳಿಗೆ ಕೃತಜ್ಞತೆಗಳನ್ನು ಸಲ್ಲಿಸಿದರು. ಶಾಲಾ ಆಡಳಿತಾಧಿಕಾರಿ ಗಣೇಶ್ ಭಟ್ ಯೋಗದ ಸಂಕಲ್ಪ ವಾಚನ ಮಾಡಿಸಿದರು. ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ವಿಷ್ಣು ನಾರಾಯಣ ಹೆಬ್ಬಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಯೋಗ ತರಬೇತುದಾರ ಶೇಖರ್ ಕಡ್ತಲ ಇವರು ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಸಾಮೂಹಿಕ ಯೋಗಾಭ್ಯಾಸ ಮಾಡಿಸಿ ಯೋಗದ ಮಹತ್ವ ಮತ್ತು ವಿವಿಧ ನಾಸಿಕ ಕ್ರಿಯೆಗಳನ್ನು ಪ್ರಾತ್ಯಕ್ಷಿಕೆ ನೀಡಿದರು. ರಾಷ್ಟ್ರೀಯ ಯೋಗ ಪಟು ಶಾರದ ಕೆದಿಲಾಯ ಇವರಿಗೆ ತಾಲೂಕು ಪರವಾಗಿ ಸನ್ಮಾನಿಸಲಾಯಿತು. ನಂತರ ಇವರಿಂದ ಯೋಗ ಪ್ರದರ್ಶನ ನಡೆಯಿತು. ವಿವಿಧ ಶಾಲೆಗಳಿಂದ ಸುಮಾರು 650 ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಭಾಗವಹಿಸಿದ್ದರು. ವೇದಿಕೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕ ಸಂಘದ ಉಪಾಧ್ಯಕ್ಷ ಪ್ರೀತಮ್ ಕುಮಾರ್, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಮಾರ್ಯೆಟ್ ಮಸ್ಕರೇನಸ್ ಉಪಸ್ಥಿತರಿದ್ದರು. ಪ್ರೌಢ ಶಾಲಾ ಮುಖ್ಯೋಪಾಧ್ಯಾಯರಾದ ರಮೇಶ್ ಆಚಾರಿ ಸ್ವಾಗತಿಸಿದರು. ಯೋಗ ಶಿಕ್ಷಕ ಶೇಖರ್ ಕಡ್ತಲ ಕಾರ್ಯಕ್ರಮ ನಿರೂಪಿಸಿದರು.

By suddi9

Leave a Reply

Your email address will not be published. Required fields are marked *