ಬಂಟ್ವಾಳ,: ಶಿಕ್ಷಣವನ್ನು ಕೊಡುವ ಶಿಕ್ಷಕರು ಸಮಾಜದ ಗೌರವಾನ್ವಿತ ವ್ಯಕ್ತಿಗಳು. ಅವರಿಂದ ಉತ್ತಮ ನಾಗರಿಕರು ಹಾಗೂ ಸುಸಂಸ್ಕೃತ ಸಮಾಜ ಸೃಷ್ಟಿಯಾಗುತ್ತದೆ ಎಂದು ಮುಹಿಯುದ್ದೀನ್ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಡಾ. ಅಹ್ಮದ್ ಹಾಜಿ ಮುಹಿಯುದ್ದೀನ್ ಹೇಳಿದರು.
22 Btl thumbe (1)
ಅವರು ತುಂಬೆ ಪದವಿ ಪೂರ್ವ ಕಾಲೇಜಿ ನಲ್ಲಿ ತನ್ನ ಹುಟ್ಟು ಹಬ್ಬದ ಆಚರಣೆಯ ಸಂದರ್ಭದಲ್ಲಿ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಯನ್ನು ಉದ್ದೇಶಿಸಿ ಮಾತನಾಡಿದರು.
ಸುಸಂಸ್ಕೃತ ಸಮಾಜ ನಿರ್ಮಾಣಕ್ಕೆ ಶಿಕ್ಷಕ ವೃಂದದವರು ಸದಾ ಜ್ಞಾನ ದಾಹಿಗಳಾಗಿ ವಿದ್ಯಾರ್ಥಿಗಳಿಗೆ ಜ್ಞಾನ ಧಾರೆ ಎರೆಯಬೇಕಾಗಿದೆ ಎಂದು ಸಲಹೆ ನೀಡಿದರು.
ಇದೇ ಸಂದರ್ಭದಲ್ಲಿ ತುಂಬೆ ವಿದ್ಯಾ ಸಂಸ್ಥೆಗೆ ಮ್ಯಾನೆಜ್ ಮೆಂಟ್ ವತಿಯಿಂದ ನೂತನ ಶಾಲಾ ಬಸ್ ಅನ್ನು ಹಸ್ತಾಂತರಿಸಲಾಯಿತು.
22 Btl thumbe (2)
ವೇದಿಕೆಯಲ್ಲಿ ಬ್ಯಾಂಕ್ ಆಫ್ ಬರೋಡಾ ತುಂಬೆ ಬ್ರಾಂಚ್ ನ ಮ್ಯಾನೇಜರ್ ಸಂದೀಪ್, ಎಂಇಟಿ ಟ್ರಸ್ಟಿ ಭೀಫಾತಿಮಾ ಅಹ್ಮದ್  ಹಾಜಿ, ತುಂಬೆ ಐಟಿಐ ಪ್ರಾಂಶುಪಾಲ ನವೀನ್ ಕುಮಾರ್ ಉಪಸ್ಥಿತರಿದ್ದರು.
ಶಿಕ್ಷಕಿಯರಾದ ಮೋಲಿ ಎಡ್ನಾ, ಪ್ರತಿಮಾ, ಜಾನೆಟ್ ಪ್ರಾರ್ಥಿಸಿದರು. ಕಾಲೇಜಿನ ಪ್ರಾಂಶುಪಾಲ ಕೆ.ಎನ್.ಗಂಗಾಧರ ಆಳ್ವ ಸ್ವಾಗತಿಸಿದರು. ಪ್ರೌಢಶಾಲಾ ಮುಖ್ಯ ಶಿಕ್ಷಕ ಶ್ರೀನಿವಾಸ್ ಕೆ. ವಂದಿಸಿ, ಕಚೇರಿ ಅಧೀಕ್ಷಕ ಅಬ್ದುಲ್ ಕಬೀರ್ ನಿರೂಪಿಸಿದರು.

By suddi9

Leave a Reply

Your email address will not be published. Required fields are marked *