ಬಂಟ್ವಾಳ: ಬೆಳ್ತಂಗಡಿ ತಾಲೂಕಿನಲ್ಲಿ ಸರಕಾರಿ ಶಾಲೆಗಳು ಖಾಸಗಿ ಶಾಲೆಗಳಗೆ ಪೈಪೆÇೀಟಿ ನೀಡಿ ಅತ್ಯುತ್ತಮ ಶಿಕ್ಷಣ ನೀಡುತ್ತಿದೆ. ಸಮುದಾಯದ ಸಹಭಾಗಿತ್ವ ಮತ್ತು ಜನಪ್ರತಿನಿಧಿಗಳು ಕಾಳಜಿ ವಹಿಸಿದಾಗ ಸರಕಾರಿ ಶಾಲೆಯನ್ನು ಅಭಿವೃದ್ಧಿ ಪಡಿಸಲು ಸಾಧ್ಯ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಹೇಳಿದರು.

ಅವರು ಶನಿವಾರ ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್‍ನ ಪ್ರಾಥಮಿಕ ವಿಭಾಗದಲ್ಲಿ ಪೂರ್ವ ಪ್ರಾಥಮಿಕ (ಎಲ್ ಕೆಜಿ, ಯುಕೆಜಿ) ತರಗತಿಗೆ ನಿರ್ಮಿಸಲಾದ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳ ಪೆÇೀಷಕರು ಸರಕಾರಿ ಶಾಲೆ ಎಂಬ ತಾತ್ಸಾರವನ್ನು ಬಿಡಬೇಕು. ಸರಕಾರಿ ಶಾಲೆಗಳಲ್ಲಿ ಅನುಭವಿ ಶಿಕ್ಷಕರಿಂದ ಉತ್ತಮ ಶಿಕ್ಷಣ ನೀಡಲಾಗುತ್ತಿದೆ. ಉತ್ತಮ ಸವಲತ್ತು ನೀಡಲಾಗುತ್ತಿದೆ. ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದ ಅವರು ಇಂದಿನ ಪರಿಸ್ಥಿತಿಯಲ್ಲಿ ನಿರಿಂಗಿಸುವಿಕೆಯ ಮಹತ್ವವನ್ನು ಅರಿತುಕೊಂಡು ಅದರ ಬಗ್ಗೆ ಎಲ್ಲರೂ ಕಾರ್ಯೋನ್ಮುಖರಾಗಬೇಕು ಎಂದು ಅವರು ಹೇಳಿದರು.
ಮಡಂತ್ಯಾರು ಗ್ರಾ.ಪಂ. ಅಧ್ಯಕ್ಷ ಗೋಪಾಲಕೃಷ್ಣ ಕೆ. ಅಧ್ಯಕ್ಷತೆ ವಹಿಸಿದ್ದರು.

ಕುವೆಟ್ಟು ಜಿ. ಪಂ. ಸದಸ್ಯೆ ಮಮತಾ ಎಂ ಶೆಟ್ಟಿ, ತಾ.ಪಂ ಸದಸ್ಯೆ ವಸಂತಿ, ಮಡಂತ್ಯಾರು ಗ್ರಾ.ಪಂ. ಸದಸ್ಯರಾದ ದಯನಂದ ಕುಲಾಲ್, ಮೈಮುನಾ, ನಳಿನಿ ಹೆಗ್ಡೆ, ಕಾಂತಪ್ಪ ಗೌಡ, ರಮೇಶ್ ಮೂಲ್ಯ, ಪುಂಜಾಲಕಟ್ಟೆ ಠಾಣಾ ಎಸ್ಸೈ ಸೌಮ್ಯ ಜೆ., ಪುಂಜಾಲಕಟ್ಟೆ ಸ.ಪ್ರ.ದ. ಕಾಲೇಜು ಪ್ರಾಂಶುಪಾಲ ಪೆÇ್ರ| ಗಣಪತಿ ಭಟ್ ಕುಳಮರ್ವ , ಕರ್ನಾಟಕ ಪಬ್ಲಿಕ್ ಸ್ಕೂಲ್, ಪ.ಪೂ.ಕಾಲೇಜು ವಿಭಾಗ ಪ್ರಾಂಶುಪಾಲೆ ಮಮತಾ, ಶಿಕ್ಷಣ ಸಂಯೋಜಕ ಸುಭಾಷ್ ಜಾಧವ್ , ಸಿಆರ್‍ಪಿ ರಘುಪತಿ ರಾವ್, ಮಡಂತ್ಯಾರು ಗ್ರಾ.ಪಂ. ಪಿಡಿಒ ನಾಗೇಶ್ ಎಂ., ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸುಧಾಕರ ಪ್ರಭು, ಪೂರ್ವ ಪ್ರಾಥಮಿಕ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ದಿವಾಕರ್ ಶೆಟ್ಟಿ ಕಂಗಿತ್ತಿಲು, ಶಾಲಾ ಶಿಕ್ಷಕ ವೃಂದ, ಪೆÇೀಷಕರು, ಶಾಲಾಭಿವೃದ್ಧಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಪೂರ್ವ ಪ್ರಾಥಮಿಕ ತರಗತಿ ನೂತನ ಕೊಠಡಿ ಕಟ್ಟಡ ನಿರ್ಮಾಣಕ್ಕೆ ಸಹಕರಿಸಿದ ದಾನಿಗಳನ್ನು ಗೌರವಿಸಲಾಯಿತು.
ಶಾಲಾ ಮುಖ್ಯ ಶಿಕ್ಷಕ ಮೋನಪ್ಪ ಕೆ. ಸ್ವಾಗತಿಸಿದರು. ಶಾಲಾಭಿವೃದ್ಧಿ ಸಮಿತಿ ಸುಧಾಕರ ಪ್ರಭು ವಂದಿಸಿದರು. ಶಿಕ್ಷಕ ಸುರೇಶ್ ಶೆಟ್ಟಿ ಕಾರ್ಯಕ್ರಮವನ್ನು ನಿರೂಪಿಸಿದರು.
