ಲಖ್ನೌ : ‘ಉತ್ತರ ಪ್ರದೇಶದ ಪಟಾಕಿ ಕಾರ್ಖಾನೆಯೊಂದರಲ್ಲಿ ಅಗ್ನಿ ಅವಘಡ  ಸಂಭವಿಸಿ 6 ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸೆ.20ರಂದು ನಡೆದಿದೆ. 

1

2

3



ದೀಪಾವಳಿ ಹಬ್ಬ ಹತ್ತಿರವಾಗುತ್ತಿದ್ದಂತೆಯೇ ಪಟಾಕಿ ಕಾರ್ಖಾನೆಗಳಲ್ಲಿ ಪಟಾಕಿ ತಯಾರಿಕೆ ಎಂದಿಗಿಂತಲೂ ಚುರುಕು ಪಡೆದೆ. ಅಂತೆಯೇ ಉತ್ತರ ಪ್ರದೇಶದಲ್ಲಿಯೂ ಪಟಾಕಿ ಕಾರ್ಖಾನೆ ಯಲ್ಲಿ ಪಟಾಕಿ ತಯಾರಿಕೆ ಮಾಡಲಾಗುತ್ತಿತ್ತು. ಈ ಸಂದರ್ಭದಲ್ಲಿ ಅಗ್ನಿ ಅವಘಡ  ಸಂಭವಿಸಿದೆ. ಸ್ಫೋಟಕ ಸಾಮಗ್ರಿಗಳಿದ್ದ ಪರಿಣಾಮ ಕಾರ್ಖಾನೆಗೆ ಕ್ಷಣಾರ್ಧದಲ್ಲಿ ಬೆಂಕಿ ಹೊತ್ತುಕೊಂಡಿದೆ. ಸ್ಥಳದಲ್ಲೇ ಇದ್ದ 6 ಕಾರ್ಮಿಕರು ಬೆಂಕಿಗೆ ಆಹುತಿಯಾಗಿದ್ದಾರೆ. 

ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿ  ಆಗಮಿಸಿದ್ದು ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಘಟನೆ ಸಂಬಂಧ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. ಈ ಹಿಂದೆಯೂ ದೀಪಾವಳಿ ಸಂದರ್ಭದಲ್ಲಿ ಚೆನ್ನೈ ನ ಪ್ರಸಿದ್ಧ ಶಿವಾಕಾಶಿ ಪಟಾಕಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿ ಹಲವು ಕಾರ್ಮಿಕರು ಸುಟ್ಟು ಕರಕಲಾಗಿದ್ದರು.

By suddi9

Leave a Reply

Your email address will not be published. Required fields are marked *