ಬಂಟ್ವಾಳ: ಅಕ್ರಮ ಗೋ ಸಾಗಾಟದ ವಿರುದ್ಧ ಪೋಲೀಸರು ಕಠಿಣ ಕಾನೂನು ಕ್ರಮಗಳನ್ನು ಕೈಗೊಂಡು, ಜಿಲ್ಲೆಯಲ್ಲಿ ಶಾಂತಿ ನೆಲೆಸಲು ಸಹಕಾರ ನೀಡಬೇಕು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹೇಳಿದ್ದಾರೆ.
ಅವರು ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಕಳೆದ ಕೆಲವು ದಿನಗಳಿಂದ ಜಿಲ್ಲೆಯಲ್ಲಿ ನಿರಂತರವಾಗಿ ಗೋ ಕಳ್ಳತನ ನಡೆಯುತ್ತಿದೆ, ಇದರ ವಿರುದ್ದಪೊಲೀಸ್ ಇಲಾಖೆ ಕಟ್ಟು ನಿಟ್ಟಿನ ಕಾನೂನು ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು, ಈ ಬಗ್ಗೆ ಹಿರಿಯ ಪೋಲೀಸ್ ಅಧಿಕಾರಿಗಳನ್ನು ಬೇಟಿ ಮಾಡಿ ಚರ್ಚೆ ಮಾಡಲಾಗುವುದು ಎಂದು ಅವರು ತಿಳಿಸಿದರು. 

ಆಕ್ರಮ ಗೋಸಾಗಾಟದ ವಿರುದ್ದ ಪೋಲೀಸರು ಕಾರ್ಯಚರಣೆ ನಡೆಸಿ ಕಾನೂನು ಕ್ರಮ ಕೈಗೊಂಡರೆ ಇಂತಹ ಅಶಾಂತಿ ತಲೆದೋರುವುದಿಲ್ಲ ,ಇದಕ್ಕೆ ಪೋಲೀಸರು ಕೂಡ ಅವಕಾಶ ನೀಡಬಾರದು ಎಂದು ಅವರು ಹೇಳಿದ್ದಾರೆ.
