ಬಂಟ್ವಾಳ: ತಾಲೂಕಿನಲ್ಲಿ ಗೋವಿನ ಹೆಸರಲ್ಲಿ ಅಶಾಂತಿಯ ವಾತಾವರಣ ಸೃಷ್ಟಿಯಾಗುತ್ತಿದೆ ಎಂದು ಆಪಾದಿಸಿರುವ ಕಾಂಗ್ರೆಸ್, ತಾಲೂಕು ಹಾಗೂ ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ನೆಲೆಗೊಳಿಸಬೇಕು ಎಂದು ಎಎಸ್ಪಿ ಸೈದುಲು ಅದಾವತ್ ಅವರಿಗೆ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದ ನಿಯೋಗ  ಮನವಿ ಸಲ್ಲಿಸಿ ಒತ್ತಾಯಿಸಿದೆ.2bhrai

ತಾಲೂಕಿನಲ್ಲಿ ಯಾರೇ ಗೋ ಕಳ್ಳತನ ಮಾಡಿದ್ದರೂ ಅದನ್ನು ಗಂಭೀರವಾಗಿ ಪರಿಗಣಿಸಿ, ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆಯೂ ಅವರು ಒತ್ತಾಯಿಸಿದ್ದಾರೆ. ನಿಯೋಗದಲ್ಲಿ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಜಿಪಂ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ಸಹಿತ ಪಕ್ಷದ ಪ್ರಮುಖರು, ಮುಖಂಡರು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *