ಬಂಟ್ವಾಳ: ಪುತ್ತೂರಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೋರ್ವನ ಜತೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ರವರ ಫೋಟೋ ವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟು ಶಾಸಕರ ಗೌರವಕ್ಕೆ ಧಕ್ಕೆ ತರುವ ಘಟನೆಗಳು ನಡೆಯುತ್ತಿದ್ದು, ಈ ಬಗ್ಗೆ ಅಪಪ್ರಚಾರ ನಡೆಸುತ್ತಿರುವವರ ವಿರುದ್ದ ಪೊಲೀಸ್ ಇಲಾಖೆಗೆ ದೂರು ನೀಡಲಾಗಿದೆ.
ಪುತ್ತೂರಿನಲ್ಲಾದ ಪ್ರಕರಣದ ಬಗ್ಗೆಯು ಜಿಲ್ಲಾ ಪೋಲೀಸ್ ವರಿಷ್ಟಾಧಿಕಾರಿಯವರಲ್ಲಿ ಮಾತುಕತೆ ನಡೆಸಲಾಗಿದ್ದು, ಘಟನೆಗೆ ಸಂಬಂಧಿಸಿ ಆರೋಪಿತರ ವಿರುದ್ದ ಕಠಿಣವಾದ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗಿದೆ ಎಂದು ಶಾಸಕ ರಾಜೇಶ್ ನಾಯ್ಕ್ ಎಂದು ತಿಳಿಸಿದ್ದಾರೆ.ಸಾಮಾಜಿಕ ಜಾಲತಾಣಗಳಲ್ಲಿ ಶಾಸಕರ ಬಗ್ಗೆ ಸುಳ್ಳು ಸುದ್ದಿ ಪ್ರಚಾರ ಮಾಡುವುದರ ಬಗ್ಗೆಯೂ ಇಲಾಖೆ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಅವರು ತಿಳಿಸಿದ್ದಾರೆ.
