ಬಂಟ್ವಾಳ: ಪುಂಜಾಲಕಟ್ಟೆ ಸಮೀಪದ ಮಂಜಲಪಲ್ಕೆ ನಿವಾಸಿ ಅಬ್ದುಲ್ ರಹಿಮಾನ್ ಅವರು ವಿದೇಶದಲ್ಲಿದ್ದು, ತನ್ನೂರಿನಲ್ಲಿ ನಿರ್ಮಿಸಿದ ನೂತನ ಮನೆ ತಾಜ್ ಮಸ್ಕನ್‍ನ ಗೃಹ ಪ್ರವೇಶದ ಪ್ರಯುಕ್ತ ತನ ಮನೆ ಬಳಿ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿ ಕೊಡುಗೆಯಾಗಿ ನೀಡಿದ್ದಾರೆ.

0307pkt2
.
ಜೂ.30 ರಂದು ಗೃಹಪ್ರವೇಶ ಸಂದರ್ಭದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾೈಕ್ ಉಳಿಪ್ಪಾಡಿ ಅವರು ಈ ಕುಡಿಯುವ ನೀರಿನ ಸೌಲಭ್ಯವನ್ನು ಉದ್ಘಾಟಿಸಿದರು. ಜಿ.ಪಂ. ಸದಸ್ಯ ಎಂ. ತುಂಗಪ್ಪ ಬಂಗೇರ, ಪಿಲಾತಬೆಟ್ಟು ಗ್ರಾ.ಪಂ. ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ಕುಮಂಗಿಲ, ಮಡಂತ್ಯಾರು ಗ್ರಾ.ಪಂ. ಮಾಜಿ ಅಧ್ಯಕ್ಷ ವಿಶ್ವನಾಥ ಪೂಜಾರಿ, ಪ್ರಮುಖರಾದ ಅಬ್ದುಲ್ ಹಮೀದ್ ಮಲ್ಪೆ, ಸುಧಾಕರ ಸಾಮಂತ್, ಅಬ್ದುಲ್ ರಹಿಮಾನ್ ಮತ್ತು ಮನೆಯವರು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *