ಬಂಟ್ವಾಳ: ಪುತ್ತೂರಿನಲ್ಲಿ ಈಚೆಗೆ ನಡೆದ ಯುವತಿಯ ಮೇಲಿನ ಸಾಮೂಹಿಕ ಅತ್ಯಾಚಾರವನ್ನು ಖಂಡಿಸಿ ಮಾಜಿ ಸಚಿವ ಬಿ ರಮಾನಾಥ ರೈ ನೇತೃತ್ವದಲ್ಲಿ ಶುಕ್ರವಾರ ಬಿ.ಸಿ.ರೋಡಿನಲ್ಲಿ ಪ್ರತಿಭಟನೆ ನಡೆಯಿತು. ಯುವತಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ವಿರುದ್ಧ ಆರೋಪಿಗಳಿಗೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಈ ಸಂದರ್ಭದಲ್ಲಿ ಮಾಜಿ ಸಚಿವ ರೈ ಆಗ್ರಹಿಸಿದರು.
ಪರಿಶಿಷ್ಟ ಜಾತಿಯ ಯುವತಿಯ ಮೇಲೆ ಅತ್ಯಾಚಾರ ನಡೆದಿದೆ , ಇಲಾಖೆ ಇದನ್ನು ಗಂಭೀರವಾಗಿ ಪರಿಗಣಿಸಿ ಆರೋಪಿಗಳ ವಿರುದ್ಧ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು .ಈ ನಿಟ್ಟಿನಲ್ಲಿ ಎಲ್ಲರೂ ಜಾತಿ ಧರ್ಮವನ್ನು ಮೀರಿ ಇಂತಹ ಕೃತ್ಯಗಳನ್ನು ಖಂಡಿಸಬೇಕು ಎಂದು ಮಾಜಿ ಸಚಿವ ರೈ ತಿಳಿಸಿದ್ದಾರೆ .ಪ್ರತಿಭಟನೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್ ಮತ್ತು ಸಂದೀಪ್ ಕುಮಾರ್ ಶೆಟ್ಟಿ ,ಜಿಲ್ಲಾ ಪಂಚಾಯಿತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ ,ಎಂಎಸ್ ಮಹಮ್ಮದ್ , ಪದ್ಮಶೇಖರ್ ಜೈನ್ , ತಾಪಂ ಉಪಾಧ್ಯಕ್ಷ ಅಬ್ಬಾಸ್ ಆಲಿ, ಮಹಿಳಾ ಕಾಂಗ್ರಸ್ಅಧ್ಯಕ್ಷರಾದ ಮಲ್ಲಿಕಾ ಶೆೆಟ್ಟಿ ,ಜಯಂತಿ ಮತ್ತು ಪುರಸಭಾ ಸದಸ್ಯರು, ತಾ. ಪಂಚಾಯತ್ ಸದಸ್ಯರು,ಪಂಚಾಯತ್ ಅಧ್ಯಕ್ಷರು ,ಪಕ್ಷದ ವಿವಿಧ ಘಟಕದ ಅಧ್ಯಕ್ಷರು ,ಯುವ ಕಾಂಗ್ರೆಸ್ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತಿಯಲ್ಲಿದ್ದರು.
