ಸರಿಯಾಗಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಅಮ್ಟಾಡಿ ಗ್ರಾಮ ಪಂಚಾಯತ್ ವಲಯ ಮಟ್ಟದ “ಪಂಚಾಯತ್ ಮಿಲನ 2019” ಕಾರ್ಯಕ್ರಮ ಬಂಟ್ವಾಳದ ಪ್ರೀತೇಶ್ ಸಭಾ ಭವನದಲ್ಲಿ ಜರುಗಿತು.ಈ ಕಾರ್ಯಕ್ರಮವನ್ನು ಮಾಜಿ ಸಚಿವ ಶ್ರೀ.ಬಿ ರಮಾನಾಥ ರೈ ಅವರು ಉದ್ಘಾಟಿಸಿ ಪಕ್ಷದ ಕಾರ್ಯಕರ್ತರು ಶಿಸ್ತಿನ ಸಿಪಾಯಿಯಂತೆ ಕಾರ್ಯಪ್ರವರ್ತರಾಗಿ ಪಕ್ಷ ಸಂಘಟನೆ ಹಾಗೂ ಪಕ್ಷದ ಬಲವರ್ಧನೆಗೆ ಹೆಚ್ಚು ಬಲ ನೀಡುವಂತೆ ಕರೆ ನೀಡಿದರು.
ಮುಂಬರುವ ಪಂಚಾಯತ್ ಚುನಾವಣೆಗೆ ಕಾರ್ಯಕರ್ತರು ಈಗಿನಿಂದಲೇ ಸಜ್ಜಾಗುವಂತೆ ಆದೇಶಿಸಿದರು. ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್ ಅಧ್ಯಕ್ಷತೆ ವಹಿಸಿ ವಿಧಾನಸಭೆ ಹಾಗೂ ಲೋಕಸಭಾ ಚುನಾವಣೆಯಲ್ಲಿ ಆದ ಸೋಲಿನ ಬಗ್ಗೆ ಪರಾಮವರ್ಶಿಸಿದರು.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ ಮಾತಾನಾಡಿ ಪಕ್ಷದ ಕಾರ್ಯಕರ್ತರು ಯಾವುದೇ ರೀತಿಯಲ್ಲಿ ದೃತಿಗೆಡದೆ ಮುಂದೆ ಬರುವ ಪಂಚಾಯಾತ್ ಚುನಾವಣೆಯಲ್ಲಿ ಪಕ್ಷದ ಸ್ಥಳಿಯ ಮುಖಂಡರು ಚುನಾವಣೆಯಲ್ಲಿ ಸ್ಪರ್ಧಿಸುವ ಮುಖಾಂತರ ಗ್ರಾಮ ಪಂಚಾಯಾತ್ ಕಾಂಗ್ರೆಸ್ ಪಕ್ಷದ ತೆಕ್ಕೆಗೆ ಬರುವಂತೆ ಕರೆ ನೀಡಿದರು. ಜಿಲ್ಲಾ ಪಂಚಾಯತ್ ಸದಸ್ಯರಾದ ಪದ್ಮಶೇಖರ್ ಜೈನ್, ಮುಖಂಡರಾದ ಪಿಯೂಸ್ ಎಲ್ ರೋಡ್ರಿಗಸ್ ತಾಲೂಕು ಪಂಚಾಯಾತ್ ಸದಸ್ಯರಾದ ಮಲ್ಲಿಕಾ ಶೆಟ್ಟಿ, ಎಫ್ರೀಮ್ ಸಿಕ್ವೇರಾ, ಜಗದೀಶ್ ಕೊಯಿಲಾ,ರತ್ನಾಕರ ಶೆಟ್ಟಿ ಕುರಿಯಾಳ, ಚಿತ್ತರಂಜನ್ ಶೆಟ್ಟಿ, ಡಾ ಶೇರಾ, ಪ್ಲೋಸಿ ಡಿಸೋಜಾ ಹಾಗೂ ಎಲ್ಲಾ ಪಂಚಾಯತ್ ಸದಸ್ಯರು, ಬೂತ್ ಸಮಿತಿ ಅಧ್ಯಕ್ಷರು ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.ವಲಯ ಅಧ್ಯಕ್ಷ ಶ್ರೀ ಚಂದ್ರಶೇಖರ್ ಶೆಟ್ಟಿ ಸ್ವಾಗತಿಸಿ ಫ್ರಾನ್ಸಿಸ್ ಸಲ್ದಾನ ವಂದನಾರ್ಪಣೆಗೈದರು.
