ಬಂಟ್ವಾಳ:ತಾಲ್ಲೂಕಿನ ಗಾಣಿಗರ ಸೇವಾ ಸಂಘದ ವತಿಯಿಂದ ಸ್ವಜಾತಿ ವಿದ್ಯಾರ್ಥಿಗಳಿಗೆ ನೀಡಲಾಗುವ ವಿದ್ಯಾರ್ಥಿ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ಇದೇ 10ರಿಂದ 20ರೊಳಗೆ ಸಂಘದ ಕಾಣೆಮಂಗಳೂರು ಕಚೇರಿಯಿಂದ ನಿಗದಿತ ಅರ್ಜಿ ನಮೂನೆ ಸ್ವೀಕರಿಸಿ ಭರ್ತಿಗೊಳಿಸಿ ಸಲ್ಲಿಸುವಂತೆ ಸಂಘದ ಅಧ್ಯಕ್ಷ ಬಿ.ರಘು ಸಪಲ್ಯ ವಿನಂತಿಸಿಕೊಂಡಿದ್ದಾರೆ.
