ಬಂಟ್ವಾಳ: ಸಿದ್ಧಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜು, ರೋಟರಿ ಕ್ಲಬ್ ಲೊರೆಟ್ಟೋ ಹಿಲ್ಸ್ ಪ್ರಾಯೋಜಕತ್ವದಲ್ಲಿ ಕಾಲೇಜಿನ ಈ ಸಾಲಿನ ರೋಟರ್‍ಯಾಕ್ಟ್ ಕ್ಲಬ್ ಪದಗ್ರಹಣ ನಡೆಯಿತು.
ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಲೊರೆಟ್ಟೋ ಹಿಲ್ಸ್ ರೋಟರಿ ಅಧ್ಯಕ್ಷ ಪದ್ಮರಾಜ ಬಲ್ಲಾಳ್ ಉದ್ಘಾಟಿಸಿ, ಪದಗ್ರಹಣ ನೆರವೇರಿಸಿದರು.
ನಿವೃತ್ತ ಮುಖ್ಯೋಪಾಧ್ಯಾಯ ಸಂಕಪ್ಪ ಶೆಟ್ಟಿ ಮಾತನಾಡಿ, ಅಪಾರವಾದ ಯುವಶಕ್ತಿ ನಮ್ಮ ದೇಶದಲ್ಲಿದೆ, ಇದು ಸರಿಯಾದ ದಾರಿಯಲ್ಲಿ ಮುಂದುವರೆದರೆ ನಾವು ಕನಸು ಕಾಣುತ್ತಿರುವ ಸದೃಢ ರಾಷ್ಟ್ರದಿಂದ ಸಾಧ್ಯ. ಇಂದು ಹಳ್ಳಿ ಹಳ್ಳಿಗಳಲ್ಲೂ ಉತ್ತಮ ಶಿಕ್ಷಣ ಸಿಗುವ ನಿಟ್ಟಿನಲ್ಲಿ ದೇಶ ಸಾಗಿದೆ. ಹಳ್ಳಿಗಳಲ್ಲಿ ಉನ್ನತ ಶಿಕ್ಷಣಕ್ಕೆ ಅವಕಾಶ ಇದೆ. ಈ ಅವಕಾಶಗಳನ್ನು ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಂಡು ಸಮಾಜಮುಖಿ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದರು. ಶಿಕ್ಷಣ ಕೇವಲ ಪಠ್ಯಕ್ಕೆ ಸೀಮಿತವಾಗದೆ ನಮ್ಮ ಜೀವನವನ್ನು ಉತ್ತಮಗೊಳಿಸುವತ್ತ ಅವಶ್ಯಕವಾದ ಮಾನವಿಯ ಮೌಲ್ಯಗಳನ್ನು ರೂಢಿಸಿಕೊಂಡು ದೇಶಕ್ಕಾಗಿ ಕಾಳಜಿ ವಹಿಸುವಂತೆ ರೂಪುಗೊಳ್ಳಬೇಕು. ಈ ನಿಟ್ಟಿನಲ್ಲಿ ನೂತನ ರೋಟಾರ್‍ಯಾಕ್ಟ್ ಕ್ಲಬ್ ಪದಾಧಿಕಾರಿಗಳು, ಸದಸ್ಯರು ಉತ್ತಮ ಚಿಂತನೆ ಮಾಡಿ ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಪದ್ಮರಾಜ ಬಲ್ಲಾಳ್ ರೋಟರಿ ಸಂಸ್ಥೆಯಲ್ಲಿ ವ್ಯಕ್ತಿತ್ವ ವಿಕಸನಕ್ಕೆ ಹಲವಾರು ಅವಕಾಶಗಳಿವೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ನಿ
ಕಾಲೇಜಿನ ಪ್ರಾಂಶುಪಾಲ ಪ್ರೊ. ಸತ್ಯನಾರಾಯಣ ಭಟ್, ಬಂಟ್ವಾಳ ರೋಟರಿ ಕ್ಲಬ್‌ನ ನಿಯೋಜಿತ ಅಧ್ಯಕ್ಷ ನಾರಾಯಣ ಹೆಗ್ಡೆ, ರೋಟಾರ್‍ಯಾಕ್ಟ್ ಚೇರಮನ್ ಪ್ರಭಾಕರ ಪ್ರಭು , ರೋಟರಿ ಕ್ಲಬ್ ಬಂಟ್ವಾಳ ಲೊರೆಟೊ ಹಿಲ್ಸ್ ಕಾರ್ಯದರ್ಶಿ ಶ್ರುತಿ ಮಾಡ್ತಾ , ನಿಕಟಪೂರ್ವ ಅಧ್ಯಕ್ಷರಾದ ಅವಿಲ್ ಮೆನೇಜಸ್, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ಸಂದೇಶ ಶೆಟ್ಟಿ , ಕಾಲೇಜಿನ ರೋಟಾರ್‍ಯಾಕ್ಟ್ ಕ್ಲಬ್ ನಿಕಟಪೂರ್ವ ಅಧ್ಯಕ್ಷ ಸುಕೇಶ್ , ನಿಯೋಜಿತ ಅಧ್ಯಕ್ಷ ಗುರುಪ್ರಸಾದ್, ಮಾರ್ಗದರ್ಶಕರಾದ ಹನುಮಂತಯ್ಯ ಜಿಎಚ್, ರೋಟರಿ ಕ್ಲಬ್ ಬಂಟ್ವಾಳ ಲೋರೆಟ್ಟೊ ಹಿಲ್ಸ್ ಹಾಗೂ ಕಾಲೇಜಿನ ರೋಟಾರ್‍ಯಾಕ್ಟ್ ಕ್ಲಬ್‌ನ ವಿವಿಧ ಸದಸ್ಯರು, ಕಾಲೇಜಿನ ಬೋಧಕ ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡರು.
ವಿದ್ಯಾರ್ಥಿನಿ ಚೈತ್ರಾ ನಿರೂಪಿಸಿದರು, ಬಂಟ್ವಾಳ ರೋಟರಿ ಕ್ಲಬ್ ಅಧ್ಯಕ್ಷ ನಾರಾಯಣ ಹೆಗ್ಡೆ ಪ್ರಾಸ್ತಾವಿಕವಾಗಿ ಕಾಲೇಜಿನ ರೋಟಾರ್‍ಯಾಕ್ಟ್ ಕ್ಲಬ್‌ನ ಪ್ರಾಮುಖ್ಯತೆ ಕುರಿತು ಮಾತನಾಡಿದರು. ಈ ಸಂದರ್ಭ ಕಾಲೇಜಿನ ಗ್ರಂಥಪಾಲಕರಾದ ಡಾ.ಶ್ರೀನಿವಾಸ ಅವರು ಇತ್ತೀಚೆಗೆ ಡಾಕ್ಟರೇಟ್ ಪದವಿ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ರೋಟರಿ ಕ್ಲಬ್ ಬಂಟ್ವಾಳ ಲೋರೆಟ್ಟೊ ಹಿಲ್ಸ್ ವತಿಯಿಂದ ಗೌರವಿಸಲಾಯಿತು.


