ಬಂಟ್ವಾಳ: ತಾಲ್ಲೂಕಿನ ವಗ್ಗ ಸಮೀಪದ ಬಡಗುಂಡಿ ರಾಷ್ಟ್ರೀಯ ಹೆದ್ದಾರಿ ಬಳಿ ಗುಡ್ಡೆಯೊಂದರಲ್ಲಿ ರಾಜಾರೋಷವಾಗಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ಬಂಟ್ವಾಳ ಗ್ರಾಮಾಂತರ ಠಾಣಾಧಿಕಾರಿ ನಾಗರಾಜ್ ನೇತೃತ್ವದ ಪೊಲೀಸರು ದಾಳಿ ನಡೆಸಿ ಎಂಟು ಮಂದಿ ಮತ್ತು 12 ಕೋಳಿ ವಶಕ್ಕೆ ತೆಗೆದುಕೊಂಡ ಘಟನೆ ಭಾನುವಾರ ಸಂಜೆ ನಡೆದಿದೆ.

ಬಂಧಿತರನ್ನು ಸ್ಥಳೀಯ ನಿವಾಸಿಗಳಾದ ಸುರೇಶ, ಲಿಂಗಪ್ಪ, ಪ್ರಕಾಶ, ಮಾರ್ಷಲ್ ಡಿಸೋಜ, ಸುನಿಲ್, ದೇವಪ್ಪ, ಗಣೇಶ ಮತ್ತು ವಿಶ್ವನಾಥ ಎಂದು ಗುರುತಿಸಲಾಗಿದೆ. ಇವರಿಂದ ಒಟ್ಟು ರೂ 2,700 ನಗದು ಮತ್ತು 12ಕೋಳಿ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

 

By suddi9

Leave a Reply

Your email address will not be published. Required fields are marked *