ವಿಟ್ಲ: ಎಲ್ಲಾ ವಿದ್ಯಾರ್ಥಿಗಳೂ ತಮ್ಮ ಮನೆಯ ಸುತ್ತಮುತ್ತ ಸ್ವಚ್ಛವಾಗಿ ಇಟ್ಟುಕೊಳ್ಳಬೇಕು ಹಾಗೂ ನೀರು ನಿಲ್ಲದಂತೆ ನೋಡಿಕೊಳ್ಳಬೇಕು ಎಂದು ಕೇಪು ಪ್ರಾಥಮಿಕ ಆರೋಗ್ಯ ಕೇಂದ್ರದ ಶ್ರೀಮತಿ ಮಮತಾ ರವರು ಹೇಳಿದರು. ಪಡಿಬಾಗಿಲು ಶಾಲೆಯಲ್ಲಿ ಡೆಂಗ್ಯೂ, ಮಲೇರಿಯಾ, ಇಲಿ ಜ್ವರಗಳ ಕುರಿತು ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಮಾಹಿತಿ ನೀಡಿದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಬಾಲಕೃಷ್ಣ ಕಾರಂತ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.WhatsApp Image 2019-07-27 at 2.19.04 PM

ಶಾಲಾ ಮುಖ್ಯ ಶಿಕ್ಷಕಿ ಶಶಿಕಲಾ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಹ ಶಿಕ್ಷಕಿ ಮಲ್ಲಿಕಾ ಸ್ವಾಗತಿಸಿದರು. ಶಿಕ್ಷಕಿ ಲಲಿತಾ ವಂದಿಸಿದರು. ಶಾಲಾಭಿವೃದ್ಧಿ ಸಮಿತಿ ಸದಸ್ಯರು, ಮಕ್ಕಳ ಪೋಷಕರು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *