ಬಂಟ್ವಾಳ: ಸಿದ್ದಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಅರ್ಥಶಾಸ್ತ್ರ ವಿಭಾಗ ಯೋಜನಾ ವೇದಿಕೆ ವತಿಯಿಂದ ವಿದ್ಯಾರ್ಥಿಗಳ ನಡಿಗೆ ಗದ್ದೆಯ ಕಡೆಗೆ ಎಂಬ ಘೋಷವಾಕ್ಯದಡಿ ಗದ್ದೆಯಲ್ಲಿ ಬೀಜ ಬಿತ್ತನೆ ಮಾಡುವ ಪ್ರಾಯೋಗಿಕ ಮಾಹಿತಿ ಕಾರ್ಯಕ್ರಮವನ್ನು ನಡೆಯಿತು.

ಸ್ಥಳೀಯ ಕೃಷಿಕ ಕಮಾಲಾಧರ ಶೆಟ್ಟಿಗಾರ್ ಇವರ ಗದ್ದೆಯಲ್ಲಿ ವಿದ್ಯಾರ್ಥಿಗಳಿಗೆ ಬೀಜ ಬಿತ್ತನೆ ಮಾಡುವ ವಿಧಾನವನ್ನು ತಿಳಿಸಲಾಯಿತು. ಸ್ವತಃ ಪ್ರಾಂಶುಪಾಲರು, ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಬೀಜ ಬಿತ್ತುವ ಕಾರ್ಯದಲ್ಲಿ ಪಾಲ್ಗೊಂಡರು. ಈ ಸಂದರ್ಭ ಭೂಮಿ ಉಳುವ , ಬೀಜ ಬಿತ್ತುವ ವಿಧಾನದ ಪ್ರಾತಿಕ್ಷಿಕೆಯ ಮೂಲಕ ತೋರಿಸಲಾಯಿತು. ಕೃಷಿಯಿಂದ ವಿಮುಕ್ತರಾಗುತ್ತಿರುವ ಯುವಜನತೆಗೆ ಮರಳಿ ಕೃಷಿಗೆ ಕರೆದುಕೊಂಡು ಹೋಗುವ ಪ್ರಯತ್ನವನ್ನು ಮಾಡಲಾಯಿತು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಸತ್ಯನಾರಾಯಣ ಭಟ್, ರಾಷ್ಟ್ರೀಯ ಸೇವಾಯೋಜನಾ ಘಟಕದ ಯೋಜನಾಧಿಕಾರಿಗಳಾದ ದೇವಿಪ್ರಸಾದ್ ,ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥೆ ಸೌಮ್ಯ ಹೆಚ್.ಕೆ ಸಹಾಯಕ ಪ್ರಾಧ್ಯಾಪಕರು ಹಾಗೂ ಸುಮಾರು 35 ವಿದ್ಯಾರ್ಥಿ, ವಿದ್ಯಾರ್ಥಿನಿಯರು ಭಾಗವಹಿಸಿದ್ದರು.
