ಬೆಂಗಳೂರು: ‘ಮೊದಲು ನೀವು ಸ್ವಚ್ಛತಾ ಕಾರ್ಯವನ್ನು ಆರಂಭಿಸಿದಿರಿ, ಬಳಿಕ ನಾವು ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಂಡಿದ್ದೇವೆ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದರು. ಪ್ರಧಾನಿಯಾದ ಬಳಿಕ ಇದೇ ಮೊದಲ ಬಾರಿಗೆ ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಅವರ ನೇತೃತ್ವದಲ್ಲಿ ರಾಜ್ಯ ಬಿಜೆಪಿ ಘಟಕದ ವತಿಯಿಂದ ಸನ್ಮಾನಿಸಲಾಯಿತು.
ಹೆಚ್‌ಎಎಲ್ ವಿಮಾನ ನಿಲ್ದಾಣದ ವಿಐಪಿ ಗೇಟ್ ಬಳಿ ನಿರ್ಮಿಸಲಾಗಿದ್ದ ವಿಶೇಷ ವೇದಿಕೆಯಲ್ಲಿ ನರೇಂದ್ರ ಮೋದಿ ಅವರನ್ನು ಸನ್ಮಾನಿಸಲಾಯಿತು. ಮೋದಿ ಅವರಿಗೆ ರೇಷ್ಮೆ ಶಾಲು ಹೋದಿಸಿ, ಮೈಸೂರು ಪೇಟ ತೊಡಿಸಿ ಮತ್ತು ವಿಶೇಷ ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು. ಸನ್ಮಾನ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾದ ಡಿ.ವಿ.ಸದಾನಂದಗೌಡ, ಅನಂತ್ ಕುಮಾರ್ ಮತ್ತು ಸಂಸದ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ, ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ್, ಸುರೇಶ್ ಕುಮಾರ್, ಮೇಯರ್ ಶಾಂತಕುಮಾರಿ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು. ಸನ್ಮಾನದ ಬಳಿಕ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ‘ದೇಶದ ಅಭಿವೃದ್ಧಿಗಾಗಿ ನಾನು ಶುಚಿತ್ವ ಅಭಿಯಾನವನ್ನು ಹಮ್ಮಿಕೊಂಡಿದ್ದೇನೆ. ಆದರೆ ಈ ಸ್ವಚ್ಛತಾ ಕಾರ್ಯ
