ಬಂಟ್ವಾಳ:  ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ತಾ.ನ ಕಕ್ಕೆಪದವಿನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ವೆಸಗಿದ ಘಟನೆ ನಡೆದಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ತನ್ನ ಅಂಗಡಿಗೆ ಬಂದ ೧೧ ವರ್ಷದ ಬಾಲಕಿಯ ಮೇಲೆ ಆರೋಪಿ ಜು.೩೧ ರಂದು ಲೈಂಗಿಕ ದೌರ್ಜನ್ಯ ನಡೆಸಿದ್ದು, ಬಾಲಕಿಯ ಮನೆಯವರು ಆ.೧ರಂದು ದೂರು ನೀಡಿದ ಹಿನ್ನೆಲೆಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ,
ಕಕ್ಯಪದವಿನ ಜುವೆಲ್ಲರಿಯ ಮಾಲಕ ಯೋಗೀಶ ಆಚಾರ್ಯ(೩೫)ಬಂಧಿತ ಆರೋಪಿಯಾಗಿದ್ದಾನೆ. ಆತ ವಿವಾಹಿತನಾಗಿದ್ದು, ಒಂದು ಮಗುವಿನ ತಂದೆಯಾಗಿದ್ದಾನೆ.ಬಾಲಕಿ ಸಂಜೆ ಸುಮಾರು ೪.೩೦ ಹೊತ್ತಿಗೆ ತನ್ನ ಅಂಗಡಿಗೆ ಬಂದಿದ್ದ ಸಂದರ್ಭ ಆರೋಪಿ ಲೈಂಗಿಕ ದೌರ್ಜನ್ಯ ನಡೆಸಿದ್ದನೆನ್ನನಲಾಗಿದೆ .
ಬಳಿಕ ಬಾಲಕಿ ಮನೆಗೆ ಅಳುತ್ತಾ ತೆರಳಿದ್ದಳು. ಮನೆ ಮಂದಿ ವಿಚಾರಿಸಿದಾಗ ಆರೋಪಿಯ ಕೃತ್ಯ ಬೆಳಕಿಗೆ ಬಂದಿತ್ತು. ಗುರುವಾರ ಬಾಲಕಿಯ ತಾಯಿ ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು.ಬಳಿಕ ಆರೋಪಿಯನ್ನು ಬಂಧಿಸಲಾಗಿತ್ತು. ಬಾಲಕಿಯನ್ನು ವೈದ್ಯಕೀಯ ತಪಾಸಣೆಗೆ ದೇರಳಕಟ್ಟೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಪುಂಜಾಲಕಟ್ಟೆ ಠಾಣೆಯಲ್ಲಿ ಫೋಕ್ಸೋ ಖಾಯ್ದೆಯನ್ವಯ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗುತ್ತಿದೆ.

By suddi9

Leave a Reply

Your email address will not be published. Required fields are marked *