ವಿಟ್ಲ :ಲಯನ್ಸ್ ಕ್ಲಬ್ ವತಿಯಿಂದ ದ ಕ ಜಿ ಪಂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ ನಡೆಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ವಿಟ್ಲ ಲಯನ್ಸ್ ಕ್ಲಬ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಶಾಲೆಗ ಹಣ್ಣಿನ ಗಿಡಗಳನ್ನು ನೀಡಿದರು.
ಲಯನ್ಸ್ ಕ್ಲಬ್ ಸದಸ್ಯ ಮಂಗೇಶ್ ಭಟ್ ಪರಿಸರ ಜಾಗೃತಿ ಬಗ್ಗೆ ಮಾಹಿತಿ ನೀಡಿದರು. ಮಾಜಿ ಅಧ್ಯಕ್ಷೆ ವಿನ್ನಿ ಮಸ್ಕರೇನಸ್ ಮತ್ತು ಸದಸ್ಯ ರವಿ ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕಿ ಶಕುಂತಳಾ ಸ್ವಾಗತಿಸಿದರು. ಶಿಕ್ಷಕ ರವೀಂದ್ರ ವಂದಿಸಿ ನಿರೂಪಿಸಿದರು.
