ಮಂಗಳೂರು : ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಚಿಲಿಂಬಿ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಶನಿವಾರ ನಡೆದಿದೆ. ಸುರತ್ಕಲ್ ಕಡೆಯಿಂದ ಮಂಗಳೂರು ಕಡೆಗೆ ಖಾಸಾಗಿ ಬಸ್ಸು ಚಿಲಿಂಬಿ ಸಮೀಪ ಬರುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೋಂದಿಗೆ ಪಾರಾಗಿದ್ದಾರೆ. ಅಪಘಾತದಿಂದಾಗಿ ಕೆಲಹೊತ್ತು ಸಂಚಾರ ಅಸ್ತ ವ್ಯಸ್ತವಾಗಿತ್ತು. ಭಾರಿ ಅನಾಹುತ ತಪ್ಪಿದಂತಾಗಿದೆ. ಉರ್ವ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
