ಮೈಸೂರು  : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಾಡಹಬ್ಬ ದಸರಾ ಕಳೆಗಟ್ಟಿದೆ. ಹತ್ತು ದಿನಗಳ ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ಸೆ.25ರಂದು ಗುರುವಾರ ಚಾಲನೆ ದೊರೆಯಲಿದೆ. ಸಾಹಿತಿ ಗಿರೀಶ್ ಕಾರ್ನಾಡ್ ದಸರಾವನ್ನು ಉದ್ಘಾಟಿಸಲಿದ್ದಾರೆ.

ಬೆಳಗ್ಗೆ ಚಾಮುಂಡಿ ಬೆಟ್ಟದಲ್ಲಿ 8.37 ರಿಂದ 9.05ರೊಳಗೆ ಸಲ್ಲುವ ಶುಭ ತುಲಾ ಲಗ್ನದಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ದಸರಾವನ್ನು ಉದ್ಘಾಟಿಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ವಿ. ಶ್ರೀನಿವಾಸ್ ಪ್ರಸಾದ್ ಸೇರಿದಂತೆ ಹಲವಾರು ನಾಯಕರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

images

ಇನ್ನೂ ಚಾಮುಂಡಿ ಬೆಟ್ಟದಲ್ಲಿ ಚಾಮುಂಡಿ ತಾಯಿಗೆ ಪೂಜೆ ನೆರವೇರುತ್ತಿದ್ದಂತೆ, ಮೈಸೂರಿನಲ್ಲಿ ಹಲವು ಕಾರ್ಯಕ್ರಮಗಳಿಗೆ ಚಾಲನೆ ಸಿಗಲಿದೆ.

ಇಂದಿನ ಕಾರ್ಯಕ್ರಮಗಳು :
ದಸರಾ ಕ್ರೀಡಾಕೂಟ, ಕಲಾ ಪ್ರದರ್ಶನ, ಚಲನ ಚಿತ್ರೋತ್ಸವ, ಫಲಪುಷ್ಪ ಪ್ರದರ್ಶನ, ಕನ್ನಡ ಪುಸ್ತಕ ಮೇಳ, ನವರಾತ್ರಿ ರಂಗೋತ್ಸವ, ಅರಮನೆ ದೀಪಾಲಂಕಾರ ಅನಾವರಣಗೊಳ್ಳಲಿದೆ. ಅಂಬಾವಿಲಾಸ ಅರಮನೆ ಆವರಣದಲ್ಲಿ ಸಂಜೆ ಸಿಎಂ ಸಿದ್ದರಾಮಯ್ಯ ಅವರು ದಸರಾ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಒಟ್ಟಿನಲ್ಲಿ ವಿಶ್ವವಿಖ್ಯಾತ ಮೈಸೂರು ದಸರಾಗೆ ಇಂದು ಚಾಲನೆ ಸಿಗಲಿದ್ದು, 10 ದಿನಗಳ ಕಾಲ ನವರಾತ್ರಿ ಸಡಗರವನ್ನು ಕಣ್ಣು ತುಂಬಿಕೊಳ್ಳಬಹುದಾಗಿದೆ.

By suddi9

Leave a Reply

Your email address will not be published. Required fields are marked *