ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ವತಿಯಿಂದ 73 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ರಮಾನಾಥ ರೈ ಯವರು ದ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿ 72 ವರ್ಷಗಳ ಹಿಂದೆ ನಮ್ಮ ದೇಶದ ಸ್ವಾತಂತ್ರ್ಯದ ಚಳುವಳಿಯಲ್ಲಿ ಭಾಗವಹಿಸಿದ ಮಹಣಿಯರ ತ್ಯಾಗ ಬಲಿದಾನವನ್ನು ಸ್ಮರಿಸಿದರು.

fremಸ್ವಾತಂತ್ರ್ಯ ಹೋರಾಟದಲ್ಲಿ ಬಾಗಿಯಾದ ಮಹಾಣಿಯರ ಬಗ್ಗೆ ಅವಹೇಳನ ಮಾಡುವುದನ್ನು ಸಹಿಸಲು ಸಾದ್ಯವಿಲ್ಲ ನಾವೆಲ್ಲರೂ ಒಗ್ಗಟ್ಟಾಗಿ ಬಲಿಷ್ಠ ಬಾರತವನ್ನು ಕಟ್ಟಲು ಪಣತೊಡೋಣ ಎಂದರು. ಸಾರ್ವಜನಿಕರಿಗೆ ಸಿಹಿ ತಿಂಡಿ ಹಂಚುವ ಮೂಲಕ ಸಂಭ್ರಮಿಸಲಾಯಿತು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅದ್ಯಕ್ಷರಾದ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಅದ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ, ಎ.ಪಿ.ಎಂ.ಸಿ ಅದ್ಯಕ್ಷರಾದ ಪದ್ಮನಾಭ ರೈ, ಪುರಸಭೆ ಸದಸ್ಯರಾದ ಗಂಗಾಧರ ಪೂಜಾರಿ, ಮುಖಂಡರಾದ ಮೋಹನ್ ಗೌಡ ಕಲ್ಮಂಜ, ಚಿತ್ತರಾಂಜನ್ ಶೆಟ್ಟಿ, ವಿಶ್ವನಾಥ ಪೂಜಾರಿ ದೆಚ್ಚಾರು, ಪ್ರವೀಣ್ ಕಿಣಿ, ವೆಂಕಪ್ಪ ಪೂಜಾರಿ, ಅಮ್ಮು ಅರಬ್ಬಿ ಗುಡ್ಡೆ, ಮಹಾಬಲ ಬಂಗೇರಾ, ಪ್ರಕಾಶ್ ಅರಬ್ಬಿ ಗುಡ್ಡೆ, ಡೆನ್ಜಿಲ್ ಹರ್ಮನ್ ನೊರೊನ್ನಾ, ಚಿಕ್ಕ ಅರಬ್ಬಿ ಗುಡ್ಡೆ ಉಪಸ್ಥಿತರಿದ್ದರು.

By Suddi9

Leave a Reply

Your email address will not be published. Required fields are marked *