ಬಂಟ್ವಾಳ: ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಭಾರತ ಸಂವಿಧಾನದ ಚೌಕಟ್ಟಿಗೆ ಒಳಪಟ್ಟು ಆಡಳಿತ ನಡೆಸುತ್ತಿರುವುದು ಹೆಮ್ಮೆಯ ವಿಷಯ, ನಾವಿಂದು ಸ್ವಾಂತಂತ್ರ್ಯ ಹೋರಾಟಗಾರರ ಆದರ್ಶಗಳನ್ನು ಮೇಲ್ಪಂಕ್ತಿಯಲ್ಲಿಟ್ಟು ಜೀವನ ನಡೆಸಬೇಕು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಯು. ಹೇಳಿದ್ದಾರೆ.

15bhtalukmain

ಬಂಟ್ವಾಳ ಮಿನಿ ವಿಧಾನಸೌಧ ಸಭಾಂಗಣದಲ್ಲಿ ಅವರು ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಬಂಟ್ವಾಳ ದ ಅಭಿವೃದ್ಧಿ ಗಾಗಿ ಎಲ್ಲರ ಸಹಕಾರ ಬೇಕು, ಪ್ರತಿಯೊಬ್ಬರೂ ಸ್ಚಚ್ಚತೆಗೆ ಹೆಚ್ಚಿನ ಗಮನಕೊಡಿ ಎಂದು ಈ ಸಂದರ್ಭ ತಿಳಿಸಿದರು.   ತಾ.ಪಂ.ಅದ್ಯಕ್ಷ ಚಂದ್ರಹಾಸ ಕರ್ಕೇರ ಮಾತನಾಡಿ ಬೇರೆ ಬೇರೆ ಚಳುವಳಿಯ ಮೂಲಕ ಭಾರತಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾನುಭಾವರ ನೆನಪು ಮಾಡಬೇಕಾಗಿದೆ ಎಂದು ಅವರು ಹೇಳಿದರು.

ಮಂಗಳೂರಿನ ರಥಬೀದಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕಿ ಡಾ. ನಾಗವೇಣಿ ಮಂಚಿ ವಿಶೇಷ ಉಪನ್ಯಾಸ ನೀಡಿ .ಮೌಲ್ಯಯುತವಾದ ಉಚಿತ ಕಡ್ಡಾಯ ಶಿಕ್ಷಣ ಸಿಕ್ಕಾಗ ಅಲ್ಲಿ ನಿಜವಾದ ಸ್ವಾತಂತ್ರ್ಯ ಸಿಗುತ್ತದೆ, ಪ್ರಜ್ಞಾವಂತರ ನಾಡು ಅದಾಗುತ್ತದೆ ಎಂದರು. ನೈತಿಕವಾಗಿ ಜೀವನ ಮೌಲ್ಯ ಗಳನ್ನು ಕಲಿತುಕೊಂಡು ಆತ್ಮ ಶಕ್ತಿಯ ಮೂಲಕ ಬದುಕಲು ಕಲಿಯಬೇಕು ಅಲ್ಲಿ ಸ್ವಾತಂತ್ರ್ಯ, ಪ್ರೀತಿ ವಿಶ್ವಾಸ ಇರಲು ಸಾಧ್ಯ. ದೇಶದ ಜೊತೆ ಬದುಕನ್ನು ಪ್ರೀತಿಸುವ ಪರಿಸರ ನಿರ್ಮಾಣ ಮಾಡೋಣ ಎಂದರು.

ಮಿನಿ ವಿಧಾನಸೌಧ ಮುಂಭಾಗ ಧ್ವಜಾರೋಹಣ ಮಾಡಿ ಗೌರವರಕ್ಷೆ ಸ್ವೀಕರಿಸಿ ಮಾತನಾಡಿದ ಬಂಟ್ವಾಳ ತಹಶೀಲ್ದಾರ್ ರಶ್ಮಿ. ಎಸ್.ಆರ್., ಸ್ವಚ್ಚ ಭಾರತವಾಗಬೇಕಾದರೆ ನಾವು ಸ್ವಚ್ಚ ಬಂಟ್ವಾಳ ಆಭಿಯಾನ ನಡೆಸಬೇಕಾಗಿದೆ . ಬಂಟ್ವಾಳ ಬಂಗಾರದ ಪೇಟೆ ಎಂಬ ಹೆಸರಿಗೆ ತಕ್ಕಂತೆ ಇಲ್ಲಿನ ಜನರು ಚಿನ್ನದಂತಹವರು, ಅದಕ್ಕೆ ಸಾಕ್ಷಿ ನೆರೆಯ ಸಂದರ್ಭ ಜಾತಿ,ಮತ,ಭೇದ ಮರೆತು ಒಟ್ಟಾಗಿ ಕೆಲಸ ಮಾಡಿದರುವುದೆ ನಿದರ್ಶನ ಎಂದರು.

ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಬಿ.ಎಂ.ಅಬ್ಬಾಸ್ ಆಲಿ, ತಾಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಬಿಇಒ ಜ್ಞಾನೇಶ್ ಉಪಸ್ಥಿತರಿದ್ದರು.

ಧ್ವಜಾರೋಹಣಕ್ಕೆ ಮೊದಲು ಪೋಲೀಸ್ , ಗೃಹರಕ್ಷಕ ದಳ, ಎನ್.ಸಿ.ಸಿ.ಭಾರತ ಸೇವಾದಳ, ಸ್ಕೌಟ್ಸ್ ಗೈಡ್ಸ್ ಕಬ್-ಬುಲ್ ಬುಲ್ ಹಾಗೂ ವಿವಿಧ ಶಾಲಾ ವಿದ್ಯಾರ್ಥಿಗಳಿಂದ ವಿವಿಧ ತುಕುಡಿಗಳಿಂದ ಆಕರ್ಷಕ ಪಥಸಂಚಲನ ನಡೆಯಿತು. ಸಭಾ ಕಾರ್ಯಕ್ರಮ ದ ಬಳಿಕ ಪುರಸಭಾ ವ್ಯಾಪ್ತಿಯ ಅಂಗನವಾಡಿ, ಪ್ರಾಥಮಿಕ, ಪ್ರೌಡ ಶಾಲಾ ವಿದ್ಯಾರ್ಥಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖಾ ವತಿಯಿಂದ ಕಾರ್ಯಕ್ರಮಗಳು ನಡೆದವು. ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹರೀಶ ಮಾಂಬಾಡಿ ವಿದ್ಯಾರ್ಥಿಗಳಿಗೆ ಸ್ಮರಣಿಕೆ ನೀಡಿದರು. ಬಂಟ್ವಾಳ ಅರಣ್ಯ ಇಲಾಖೆಯ ವಲಯಾರಣ್ಯಾಧಿಕಾರಿ ಸುರೇಶ್ ಬಿ. ನೇತೃತ್ವದಲ್ಲಿ ಅರಣ್ಯ ಇಲಾಖೆಯ ವತಿಯಿಂದ ವಿದ್ಯಾರ್ಥಿಗಳಿಗೆ ಗಿಡವಿತರಣೆ, ಶಿಕ್ಷಣ ಇಲಾಖೆಯ ವತಿಯಿಂದ ಸಾಧಕ ವಿದ್ಯಾರ್ಥಿಗಳಿಗೆ ಲ್ಯಾಪ್ ಟ್ಯಾಪ್ ವಿತರಣೆ ನಡೆಯಿತು. ತಾಲೂಕು ಪಂಚಾಯತ್ ಮುಖ್ಯಕಾರ್ಯನಿರ್ವಣಾಧಿಕಾರಿ ರಾಜಣ್ಣ ಸ್ವಾಗತಿಸಿದರು. ಶಿಕ್ಷಣಾಧಿಕಾರಿ ಜ್ಞಾನೇಶ್ ವಂದಿಸಿದರು. ಮಂಜು ವಿಟ್ಲ ಕಾರ್ಯಕ್ರಮ ನಿರೂಪಿಸಿದರು.

By Suddi9

Leave a Reply

Your email address will not be published. Required fields are marked *