ಸುದ್ದಿ9 ಕೈಕಂಬ: ಬಜಪೆ ಸಹಕಾರಿ ಕ್ಷೇತ್ರದಲ್ಲಿ ಪ್ರತಿಷ್ಠಿತ ಸಂಸ್ಥೆಯಾಗಿ ಗುರುತಿಸಿಕೊಂಡಿರುವ ಬಜಪೆ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನೀಡುವ ಪ್ರಾಥಮಿಕ ಕೃಷಿ ಬ್ಯಾಂಕ್ ಗಳ ಅತ್ಯುತ್ತಮ ನಿರ್ವಹನೆಗೆ ನೀಡುವ 2012-2013ನೇ ಸಾಲಿನ ರಾಜ್ಯ ಮಟ್ಟದ ಪ್ರಥಮ ಸ್ಥಾನದ ಪ್ರಶಸ್ತಿಯವನ್ನು ಪಡೆದುಕೊಂಡಿದೆ.
prasasthi pradana
ಬೆಂಗಳೂರಿನ ಅಪೆಕ್ಸ್ ಬ್ಯಾಂಕ್ ಬ್ಯಾಂಕ್ ಸಭಾಂಗಣದಲ್ಲಿ ಗುರುವಾರ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಬಜಪೆ ವ್ಯವಸಾಯ ಬ್ಯಾಂಕ್ ನ ಅಧ್ಯಕ್ಷ ಮೋನಪ್ಪ ಶೆಟ್ಟಿ ಎಕ್ಕಾರ್ , ಪ್ರಧಾನ ವ್ಯವಸ್ಥಾಪಕ ರತ್ನಾಕರ ಶೆಟ್ಟಿ ,ನಿರ್ದೇಶಕ ಡಾ.ಎಂ ಎನ್ ರಾಜೇಂದ್ರ ಕುಮಾರ್ ಅವರು ಅಪೆಕ್ಸ್ ಬ್ಯಾಂಕ್ ಉಪಾಧ್ಯಕ್ಷ ಶಿವಾನಂದ ಅಪ್ಪಾ ಸಾಹೇಬ್ ಮಾನ್ಕರ್ ಹಾಗೂ ಕಾರ್ಯನಿರ್ವಾಹಕ ನಿರ್ದೇಶಕ ರಮಣರೆಡ್ಡಿ ಅವರಿಂದ ಪ್ರಶಸ್ತಿಯನ್ನು ಸ್ವೀಕರಿಸಿದರು.
ಸಹಕಾರಿ ಸಂಸ್ಥೆಗಳ ರಿಜಿಸ್ತ್ರರ್ ಡಾ. ಚೆನ್ನಪ್ಪ ಗೌಡ ,ಶಾಸಕ ಹಾಗೂ ಅಪೆಕ್ಸ್ ಬ್ಯಾಂಕ್ ನಿರ್ದೇಶಕರು ಆಗಿರುವ ಕೆ.ಎಸ್ ರಾಜನ್, ಶಿವಾನಂದ ಪಾಟೇಲ್ ,ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಕಾರ್ಯನಿರ್ವಾಹಕ ನಿರ್ದೇಶಕ ಎಂ ಗೋಪಾಲಕೃಷ್ಣ ಭಟ್ ಉಪಸ್ಥಿತದ್ದರು

By suddi9

Leave a Reply

Your email address will not be published. Required fields are marked *