ದೆಹಲಿ: ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಯಾವ ಪಕ್ಷ ಎಷ್ಟು ಸ್ಥಾನ ಗಳಿಸಲಿದೆ ಎಂಬ ಬಗ್ಗೆ ನಡೆದ ಸಮೀಕ್ಷೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಅತೀ ಹೆಚ್ಚು ಸ್ಥಾನ ಗಳಿಸಲಿದೆ ಎಂದು ತಿಳಿದು ಬಂದಿದೆ.
ಟೈಮ್ಸ್ ನೌ-ಸೀ ವೋಟಸರ್್ ನಡೆಸಿರುವ ಈ ಸಮೀಕ್ಷೆಯಲ್ಲಿ ಎನ್ಡಿಎಯು 227 ಸ್ಥಾನಗಳನ್ನು ಗಳಿಸಲಿದೆ ಮತ್ತು ಯುಪಿಎ ಮೈತ್ರಿ ಕೂಟ 89 ಸ್ಥಾನ ಗಳಿಸಲಷ್ಟೇ ಶಕ್ತವಾಗಲಿದೆ. 2009ರಲ್ಲಿ ಎನ್ಡಿಎ 159 ಸ್ಥಾನ ಪಡೆದಿತ್ತು. ಕಾಂಗ್ರೆಸ್ ಪಕ್ಷ ಒಟ್ಟಾರೆಯಾಗಿ 117 ಸ್ಥಾನಗಳನ್ನು ಕಳೆದುಕೊಂಡು ಹೀನಾಯ ಸ್ಥಿತಿ ತಲುಪಲಿದೆ ಎಂದು ಸಮೀಕ್ಷೆ ತಿಳಿಸಿದೆ. ಆದರೆ ಕನರ್ಾಟಕದಲ್ಲಿ ಕಾಂಗ್ರೆಸ್ ಪ್ರಾಬಲ್ಯ ಮೆರೆಯಲಿದೆ. ಈ ಸಮೀಕ್ಷೆಯಿಂದ ಬಿಜೆಪಿ ಪಾಳಯದಲ್ಲಿ ಹೊಸ ಸಂಚಲನ ಮೂಡಿದ್ದು ಮ್ಯಾಜಿಕ್ ಸಂಖ್ಯೆ 272ನ್ನು ತಲುಪಲು ಎಲ್ಲಾ ರೀತಿಯ ತಯಾರಿ ಆರಂಭವಾಗಿದೆ. ಈ ಸಮೀಕ್ಷೆ ಪ್ರಕಾರ ಎನ್ಡಿಎ ಅಧಿಕಾರದ ಚುಕ್ಕಾಣಿ ಹಿಡಿಯಲು ಮತ್ತು ನರೇಂದ್ರ ಮೋದಿ ಪ್ರಧಾನಿಯಾಗಲು 55 ಸ್ಥಾನಗಳ ಕೊರತೆ ಉಂಟಾಗಲಿದೆ
