ಬಂಟ್ವಾಳ: ಲಯನ್ಸ್ ಕ್ಲಬ್ ಬಂಟ್ವಾಳ ಹಾಗೂ ಜೇಸಿಐ ಜೋಡುಮಾರ್ಗ ನೇತ್ರಾವತಿ ಇದರ ಜಂಟಿ ಆಶ್ರಯದಲ್ಲಿ ಸರಕಾರಿ ಪಾಲಿಟೆಕ್ನಿಕ್ ಬಂಟ್ವಾಳ ಇದರ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆ ಮತ್ತು ಅಪಘಾತ ಜಾಗೃತಿ ಕಾರ್ಯಕ್ರಮವನ್ನು ನಡೆಸಲಾಯಿತು.
Road Safety programಸಂಪನ್ಮೂಲ ವ್ಯಕ್ತಿಯಾಗಿ  ಭಾಗವಹಿಸಿದ ಮೂಡಬಿದ್ರೆ ಲಯನ್ಸ್ ಕ್ಲಬ್‌ನ ಪೂವಾಧ್ಯಕ್ಷ  ಲ| ಶಿವಪ್ರಸಾದ್ ಹೆಗ್ಡೆ   ಆಡಿಯೋ ಮತ್ತು ವಿಡಿಯೋ ತುಣುಕುಗಳ ಮೂಲಕ ರಸ್ತೆ ಸುರಕ್ಷತೆ ಮತ್ತು ಸುರಕ್ಷತೆ ವಾಹನ ಚಾಲನೆಯ ಬಗ್ಗೆ  ಮಾಹಿತಿ ನೀಡಿದರು. ಕಾರ್ಯಕ್ರಮದ  ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ  ಪ್ರಕಾಶ್ ಸಿ.ಜೆ ವಹಿಸಿದ್ದರು.     ಬಂಟ್ವಾಳ  ಲಯನ್ಸ್ ಕ್ಲಬ್ ಅಧ್ಯಕ್ಷ ಶ್ರೀನಿವಾಸ ಪೂಜಾರಿ, ಜೇಸಿಐ ಜೋಡುಮಾರ್ಗ ನೇತ್ರಾವತಿಯ ಅಧ್ಯಕ್ಷ ಹರ್ಷರಾಜ್ ಸಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

By Suddi9

Leave a Reply

Your email address will not be published. Required fields are marked *