ಬಂಟ್ವಾಳ : ತಾಲೂಕು ಮಟ್ಟದ ಪದವಿಪೂರ್ವ ಕಾಲೇಜು ವಿಭಾಗದ ಕಬಡ್ಡಿ ಪಂದ್ಯಾವಳಿಯು ಅಡ್ಯನಡ್ಕ ಜನತಾ ಪದವಿಪೂರ್ವ ಕಾಲೇಜಿನಲ್ಲಿ ಆ.29ರಂದು ನಡೆಯಿತು. ಅಡ್ಯನಡ್ಕ ಎಜುಕೇಶನಲ್ ಸೊಸೈಟಿಯ ಅಧ್ಯಕ್ಷರಾದ ಗೋವಿಂದ ಪ್ರಕಾಶ್ ಸಾಯ ಪಂದ್ಯಾಟಕ್ಕೆ ಚಾಲನೆ ನೀಡಿದರು. ಸಂಸ್ಥೆಯ ಆಡಳಿತಾಧಿಕಾರಿ ರಮೇಶ್ ಎಂ ಬಾಯಾರ್, ಕಾಲೇಜಿನ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಗಣೇಶ ಪೆರ್ಲ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಜಯಾನಂದ ಉಳಯ, ಜನತಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಿ. ಶ್ರೀನಿವಾಸ್, ಜನತಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಟಿ. ಆರ್. ನಾಯ್ಕ್, ದೈಹಿಕ ನಿರ್ದೇಶಕರಾದ ವಸಂತ ಗೌಡ, ದೈಹಿಕ ಶಿಕ್ಷಕರಾದ ಉದಯಕೃಷ್ಣ ಭಟ್ ಉಪಸ್ಥಿತರಿದ್ದರು.

Taluk level kabaddi tournament

ಹುಡುಗರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಮೌಂಟ್ ಕಾರ್ಮೆಲ್ ಪದವಿ ಪೂರ್ವ ಕಾಲೇಜು ಮೊಡಂಕಾಪು, ದ್ವಿತೀಯ ಸ್ಥಾನವನ್ನು ವಿಠಲ ಪದವಿ ಪೂರ್ವ ಕಾಲೇಜು ವಿಟ್ಲ ಪಡೆಯಿತು. ವೈಯಕ್ತಿಕ ವಿಭಾಗದಲ್ಲಿ ಸಿಯಾನ್, ಮೌಂಟ್ ಕಾರ್ಮೆಲ್ ಕಾಲೇಜು ಮೊಡಂಕಾಪು ಪ್ರಶಸ್ತಿ ಪಡೆದರು. ಹುಡುಗಿಯರ ವಿಭಾಗದಲ್ಲಿ ವಿಠಲ ಪದವಿ ಪೂರ್ವ ಕಾಲೇಜು ವಿಟ್ಲ ಪ್ರಥಮ ಸ್ಥಾನ, ಶ್ರೀರಾಮಚಂದ್ರ ಪದವಿ ಪೂರ್ವ ಕಾಲೇಜು ಪೆರ್ನೆ ದ್ವಿತೀಯ ಸ್ಥಾನ ಪಡೆಯಿತು. ವೈಯಕ್ತಿಕ ವಿಭಾಗದಲ್ಲಿ ಆಶಾ, ವಿಠಲ ಪದವಿಪೂರ್ವ ಕಾಲೇಜು ವಿಟ್ಲ ಅವರು ಪ್ರಶಸ್ತಿ ಪಡೆದುಕೊಂಡರು. ವಿಜೇತರಿಗೆ ವಿಟ್ಲ ಆರಕ್ಷಕ ಠಾಣಾಧಿಕಾರಿ ಯಲ್ಲಪ್ಪ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಶಾಮಿಯಾನ ಮಾಲಕರ ಸಂಘದ ಅಧ್ಯಕ್ಷ ಬಾಬು ಕೊಪ್ಪಳ ಬಹುಮಾನ ವಿತರಿಸಿದರು.

By Suddi9

Leave a Reply

Your email address will not be published. Required fields are marked *